ಪಟ್ಟಣದ ಶಾಸಕರ ಕಚೇರಿ ಆವರಣದಲ್ಲಿ ತಾಲ್ಲೂಕು ವಿಶ್ವಕರ್ಮ ಜನಾಂಗದವರಿದ ಮಂಗಳವಾರ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಪ್ರತಿಯೊಂದು ಜನಾಂಗದವರು ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಸರ್ಕಾರದ ಅನುದಾನ ಸಹ ಅಗತ್ಯವಾಗಿದ್ದು ಲಭ್ಯವಿರುವ ಅನುದಾನವನ್ನು ಪಡೆದು ಕೊಳ್ಳಲು ಎಲ್ಲಾ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ಜನಾಂಗದವರು ಒಗ್ಗಟ್ಟಿನಿಂದ ತಮ್ಮ ಪಾಲಿನ ಹಕ್ಕುಗಳನ್ನು ಪಡೆದು ಕೊಳ್ಳಲು ಹೋರಾಟ ಮಾಡಿದರೆ ಯಶಸ್ಸು ಖಂಡಿತ ಎಂದರು.