ಪ್ರಧಾನಮಂತ್ರಿ ಉಜ್ವಲ ಯೋಜನೆಯ ವತಿಯಿಂದ ಪರಿಶಿಷ್ಟಜಾತಿ ಮತ್ತು ಪಂಗಡ ಹಾಗೂ ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಉಚಿತವಾಗಿ ಗ್ಯಾಸ್ ಪರಿಕರಗಳನ್ನು ವಿತರಿಸುತ್ತಿರುವುದರಿಂದ ಗ್ರಾಮೀಣ ಪ್ರದೇಶದ ಬಡ ಜನರ ಉರುವಲು ಸಮಸ್ಯೆಗಳನ್ನು ಪರಿಹರಿಸಿದಂತಾಗಿ ಎಂದು ಶಾಸಕ ಕೆ.ಮಹದೇವ್ ಹೇಳಿದರು.

ತಾಲ್ಲೂಕಿನ ಪಂಚವಳ್ಳಿಯ ಶ್ರೀ ಬಾಲಾಜಿ ಭಾರತ್ ಗ್ಯಾಸ್ ಏಜೆನ್ಸಿ ವತಿಯಿಂದ ಉಜ್ವಲ ಯೋಜನೆಯಡಿ ಉಚಿತವಾಗಿ ಗ್ಯಾಸ್ ಪರಿಕರಗಳನ್ನು ವಿತರಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದ ಹಲವೆಡೆ ಮಹಿಳೆಯರು ಅಡುಗೆ ತಯಾರಿಸಲು ಉರುವಲುಗಳನ್ನು ಬಳಸುತ್ತಿರುವುದರಿಂದ ಉಸಿರಾಟ ತೊಂದರೆಯ ಕಾಯಿಲೆಗಳಿಂದ ಬಳಲುತ್ತಿದ್ದು ಕಂಡುಬರುತ್ತಿತ್ತು ಈ ಯೋಜನೆಯಿಂದ ಸಮಸ್ಯೆ ನಿವಾರಣೆಯಾಗಿದ್ದು ಕೇಂದ್ರ ಸರ್ಕಾರಕ್ಕೆ ಅಭಿನಂದನೆ ತಿಳಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ 150 ಫಲಾನುಭವಿಗಳಿಗೆ ಉಚಿತವಾಗಿ ಗ್ಯಾಸ್ ಪರಿಕರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷೆ ಸುಧಾ, ಸದಸ್ಯೆ ರುಕ್ಮಣಿ, ಸಂಸ್ಥೆಯ ಮಂಜುನಾಥ್, ಸಂತೋಷ್, ಮುಖೇಶ್‌ಕುಮಾರ್, ತಾ.ಪಂ.ಸ್ಥಾಯಿ ಸಮಿತಿ ಸದಸ್ಯ ಟಿ.ಈರಯ್ಯ, ಮುಖಂಡರಾದ ಸಿ.ಎನ್.ರವಿ, ನಿಂಗರಾಜ್, ಶಿವಕುಮಾರ್‌ಸ್ವಾಮಿ, ರಾಜಣ್ಣ, ತಿಮ್ಮೇಗೌಡ, ಪಿಡಿಒ ಬಸವರಾಜ್ ಮತ್ತಿತರರು ಹಾಜರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top