ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕಾಗಿ ವಿಶ್ರಾಂತಿ ಪಡೆಯದೆ ದುಡಿಯುವುದಾಗಿ ಶಾಸಕ ಕೆ.ಮಹದೇವ್ ಹೇಳಿದರು.

ಪಿರಿಯಾಪಟ್ಟಣ ಪುರಸಭೆ ವ್ಯಾಪ್ತಿಯಲ್ಲಿ ಎಸ್‌ಎಫ್‌ಸಿ ವಿಶೇಷ ಅನುದಾನ, ಮುಕ್ತನಿಧಿ ಅನುದಾನ ಹಾಗೂ 14ನೇ ಹಣಕಾಸು ಯೋಜನೆಯಡಿ ನಿರ್ಮಿಸಲಾಗಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿಸಿ ರಾಂಪುರ ಸಮುದಾಯ ಭವನದಲ್ಲಿ ಮಾತನಾಡಿದರು. ಪುರಸಭೆ ವ್ಯಾಪ್ತಿಯಲ್ಲಿ ಸರ್ಕಾರ ವತಿಯಿಂದ ಜಮೀನು ಖರೀದಿಸಿ ನಿವೇಶನ ರಹಿತರಿಗೆ ನೀಡುವ ಉದ್ದೇಶವಿದೆ. ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಬಾರದಂತೆ ನಿಗಾವಹಿಸಿ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರಿಂದ ದೂರುಗಳು ಬರದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಶಾಸಕನಾದ ನಂತರ ಪಟ್ಟಣ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮೊದಲ ಕಾರ್ಯಕ್ರಮ ಇದಾಗಿದ್ದು ಮುಂಬರುವ ದಿನಗಳಲ್ಲಿ ಪಟ್ಟಣದ ಅಭಿವೃದ್ದಿಗಾಗಿ ಶ್ರಮಿಸುವೆ ಎಂದರು.
ಮುಂಬರುವ ಪುರಸಭೆ ಚುನಾವಣೆಯಲ್ಲಿ ಪುರಸಭೆಯ 23 ವಾರ್ಡ್ಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಮತದಾರರು ಪಕ್ಷವನ್ನು ಬೆಂಬಲಿಸುವAತೆ ಕೋರಿದರು.
ಮುಖಂಡ ಬಿ.ಶಿವಣ್ಣ ಮಾತನಾಡಿ ಹಿಂದುಳಿದ ಜನತೆಗೆ ಸರ್ಕಾರದ ಸವಲತ್ತುಗಳ ಮಾಹಿತಿ ಕೊರತೆಯಿದ್ದು ರಾಂಪುರ ಬಡಾವಣೆಯಲ್ಲಿ ಶೌಚಾಲಯ, ನಿವೇಶನ ಹಾಗೂ ರುದ್ರಭೂಮಿ ಕೊರತೆಯಿದ್ದು ಸಮಸ್ಯೆ ನಿವಾರಿಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಶಾಸಕರು ಶೀಘ್ರದಲ್ಲೇ ಸರ್ಕಾರಿ ಗೋಮಾಳದಲ್ಲಿ ಸರ್ವೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ರಾಂಪುರ ನಿವಾಸಿಗಳ ವತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಪಟ್ಟಣದ ಸಂತೇಮಾಳದಲ್ಲಿ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯದ ಉದ್ಘಾಟನೆ, ಡಿಪಿಬಿಎಸ್ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ನಿರ್ಮಿಸಿರುವ ಪುಟ್ಟಣ್ಣ ಕಣಗಾಲ್ ಬಯಲು ರಂಗ ಮಂದಿರದ ಉದ್ಘಾಟನೆ, ರಾಂಪುರ ಬಡಾವಣೆಯಲ್ಲಿ ಸಮುದಾಯ ಭವನದ ಮುಂದುವರೆದ ಕಾಮಗಾರಿಗೆ ಚಾಲನೆ, ಮಹದೇಶ್ವರ ಬಡಾವಣೆಯಲ್ಲಿ ನಿರ್ಮಿಸಿರುವ ಸಮುದಾಯ ಭವನದ ಉದ್ಘಾಟನೆ, ಚಿಕ್ಕಪರಿವಾರ ಬೀದಿ ಶ್ರೀರಾಮ ಮಂದಿರ ಉದ್ಘಾಟನೆ, ಸಣ್ಣಯ್ಯನಬೀದಿ ಶ್ರೀ ರಾಮಮಂದಿರ ಉದ್ಘಾಟನೆ ಹಾಗೂ ಅಬ್ಬೂರು ರಸ್ತೆಯ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.


ವಿದ್ಯಾರ್ಥಿಗಳೊಂದಿಗೆ ಮಾತುಕತೆ : ಗೋಣಿಕೊಪ್ಪ ರಸ್ತೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ಬಯಲು ರಂಗ ಮಂದಿರ ಉದ್ಘಾಟನೆ ಸಮಯ ಹಾಜರಿದ್ದ ವಿದ್ಯಾರ್ಥಿಗಳ ಬಳಿ ದಾವಿಸಿದ ಶಾಸಕ ಕೆ.ಮಹದೇವ್ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ವಿಚಾರಿಸಿ ಎಲ್ಲರಿಗೂ ಕೈಕುಲುಕಿ ಚನ್ನಾಗಿ ವಿದ್ಯಾಭ್ಯಾಸ ಮಾಡುವಂತೆ ಕಿವಿಮಾತು ಹೇಳಿದರು.

Leave a Comment

Your email address will not be published. Required fields are marked *

error: Content is protected !!
Scroll to Top