ಪಟ್ಟಣದ ಸರ್ಕಾರಿ ಬಾಲಕಿಯರ ಪದಿವಪೂರ್ವ ಕಾಲೇಜು ಆವರಣದಲ್ಲಿ ರಾಜ್ಯ ಸರ್ಕಾರದ ಅನುದಾನದಡಿ ನಿರ್ಮಾಣವಾಗುತ್ತಿರುವ ನೂತನ ಕೊಠಡಿಗಳ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕಾಗಿ ನಗರ ಪ್ರದೇಶಗಳ ಸರ್ಕಾರಿ ಕಾಲೇಜುಗಳಿಗೆ ಪ್ರವೇಶ ಪಡೆಯುವುದರಿಂದ ಅವರಿಗೆ ಉತ್ತಮ ಶಿಕ್ಷಣ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಉಂಟಾಗಬಾರದು, ಸರ್ಕಾರಿ ಶಾಲಾ ಕಾಲೇಜುಗಳಲ್ಲಿನ ಸೌಕರ್ಯಗಳ ಕೊರತೆ ನೀಗಿಸಿದರೆ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ಉತ್ತಮ ಫಲಿತಾಂಶ ಪಡೆಯಬಹುದು ಎಂದರು.
ಇದೇ ಸಂದರ್ಭ ಕಾಲೇಜಿನ ಮೂಲಭೂತ ಸೌಕರ್ಯಗಳು ಹಾಗೂ ನಿಂತುಹೋಗಿರುವ ಕಟ್ಟಡ ಪುನರ್ ನಿರ್ಮಿಸುವಂತೆ ಪ್ರಾಂಶುಪಾಲೆ ನಾಗಮ್ಮ ರವರು ಮಾಡಿದ ಮನವಿಗೆ ಸ್ಪಂದಿಸಿ ಮಾತನಾಡಿದ ಶಾಸಕರು ಈಗಾಗಲೇ ಕಟ್ಟಡ ನಿರ್ಮಾಣಕ್ಕೆ 1.20 ಕೋಟಿ ಅನುದಾನ ಬಿಡುಗಡೆಯಾಗಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭಿಸುವAತೆ ಗುತ್ತಿಗೆದಾರರಿಗೆ ಆದೇಶಿಸಿದರು. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಶಾಲಾ ಕಾಲೇಜು ಸಮಯದಲ್ಲಿ ನಿಗದಿತ ಸಮಯಕ್ಕೆ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಬಹಳ ಬೇಗನೆ ಮನೆಯಿಂದ ಹೊರಡುವುದರಿಂದ ಆಗುತ್ತಿರುವ ಅನಾನುಕೂಲದ ಬಗ್ಗೆ ದೂರುಗಳು ಬಂದಿದ್ದು ಸಂಬAಧಿಸಿದ ಸ್ಥಳೀಯ ಸಾರಿಗೆ ಅಧಿಕಾರಿಗಳಿಗೆ ಶಾಲಾ ಕಾಲೇಜು ಸಮಯದಲ್ಲಿ ಗ್ರಾಮಾಂತರ ಪ್ರದೇಶಗಳ ಸಾರಿಗೆ ಸೌಲಭ್ಯಕ್ಕೆ ಹೆಚ್ಚು ಆದ್ಯತೆ ನೀಡುವಂತೆ ಸೂಚಿಸಿದ್ದೇನೆ ಎಂದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ನಾಗಮ್ಮ, ಉಪಪ್ರಾಂಶುಪಾಲ ಮಹದೇವ್, ತಾ.ಪಂ.ಸದಸ್ಯ ರಂಗಸ್ವಾಮಿ, ಮಾಜಿ ಉಪಾಧ್ಯಕ್ಷ ರಘುನಾಥ್, ಪುರಸಭಾ ಸದಸ್ಯರಾದ ಪಿ.ಸಿ.ಕೃಷ್ಣ, ಮಂಜುನಾಥಸಿAಗ್, ಮಹೇಶ್, ವಿನೋದ್ಕುಮಾರ್, ಭಾರತಿ, ಜಿ.ಪಂ.ಇAಜಿನಿಯರ್ ಅರ್ಷದ್ಪಾಷ, ಮುಖಂಡರಾದ ಉಮೇಶ್, ಇಲಿಯಾಸ್, ಸಿ.ಎನ್.ರವಿ, ಚಂದ್ರು, ನಾಗೇಶ್, ಗೋಪಾಲ್ ಹಾಗೂ ಕಾಲೇಜಿನ ಉಪನ್ಯಾಸಕರುಗಳು, ವಿದ್ಯಾರ್ಥಿಗಳು ಹಾಜರಿದ್ದರು.