ಮಾಂತರ ಪ್ರದೇಶಗಳ ಪ್ರತಿಯೊಂದು ಮನೆಗಳಲ್ಲೂ ಶೌಚಾಲಯಗಳನ್ನು ನಿರ್ಮಿಸಿಕೊಂಡು ಸ್ವಚ್ಚತೆಗೆ ಹೆಚ್ಚು ಆದ್ಯತೆ ನೀಡಬೇಕೆಂದು ಶಾಸಕ ಕೆ.ಮಹದೇವ್ ಹೇಳಿದರು.

ತಾ.ಪಂ.ವತಿಯಿAದ ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ನಡೆದ ಸ್ವಚ್ಚತಾ ಅರಿವು ಜಾಥಾ ಕ್ಕೆ ಬಸವೇಶ್ವರ ವೃತ್ತದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ಸರ್ಕಾರ ಬಯಲು ಶೌಚಮುಕ್ತ ಗ್ರಾಮಗಳನ್ನು ಮಾಡಬೇಕೆನ್ನುವ ಉದ್ದೇಶದಿಂದ ಪಂಚಾಯಿತಿ ವತಿಯಿಂದ ಪ್ರತಿ ಕುಟುಂಬಕ್ಕೆ ಶೌಚಾಲಯ ನಿರ್ಮಾಣಕ್ಕಾಗಿ ಅನುದಾನವನ್ನು ನೀಡಿ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸುತ್ತಿದೆ, ಸರ್ಕಾರದ ಉಪಯುಕ್ತ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನತೆ ಸದುಪಯೋಗಪಡಿಸಿಕೊಳ್ಳಬೇಕು, ಗ್ರಾಮಾಂತರ ಪ್ರದೇಶಗಳ ಹಲವೆಡೆ ಬಯಲು ಶೌಚಾಲಯ ಪದ್ದತಿ ಇನ್ನೂ ಕಾಣುತ್ತಿದ್ದು ಸ್ಥಳೀಯ ಪಂಚಾಯಿತಿ ಅಧಿಕಾರಿಗಳು ಅಂತಹವರ ಮನವೊಲಿಸಿ ಶೌಚಾಲಯ ನಿರ್ಮಾಣಕ್ಕೆ ಮುಂದಾಗಬೇಕು, ಸ್ಥಳೀಯ ಜನಪ್ರತಿನಿಧಿಗಳು ಸಹ ತಮ್ಮ ಗ್ರಾಮಗಳ ಸ್ವಚ್ಚತೆಗೆ ಮೊದಲ ಆದ್ಯತೆ ನೀಡಿ ಗ್ರಾಮವನ್ನು ಬಯಲುಮುಕ್ತ ಶೌಚಾಲಯ ಗ್ರಾಮವಾಗಿ ಮಾಡಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾ.ಪಂ.ಅಧ್ಯಕ್ಷೆ ಕೆ.ಆರ್.ನಿರೂಪ, ಸದಸ್ಯ ಎಸ್.ರಾಮು, ತಾ.ಪಂ.ಇಒ ಡಿ.ಸಿ.ಶೃತಿ ಮಾತನಾಡಿದರು.
ಪಟ್ಟಣದ ಪುಷ್ಪ ಮತ್ತು ಮಾನಸ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿ ಸ್ವಚ್ಚತೆ ಬಹತ್ವದ ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಈ ಸಂದರ್ಭ ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ, ತಾಲ್ಲೂಕಿನ ವಿವಿಧ ಗ್ರಾ.ಪಂ.ಗಳ ಅಭಿವೃದ್ದಿ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
20ಪಿವೈಪಿ01: ಪಿರಿಯಾಪಟ್ಟಣದಲ್ಲಿ ನಡೆದ ವಿಶ್ವ ಶೌಚಾಲಯ ದಿನಾಚರಣೆ ಕಾರ್ಯಕ್ರಮ ಅಂಗವಾಗಿ ವಿದ್ಯಾರ್ಥಿಗಳು ಮತ್ತು ತಾ.ಪಂ. ಅಧಿಕಾರಿಗಳು ಪ್ರಮುಖ ರಸ್ತೆಗಳಲ್ಲಿ ಶೌಚಾಲಯ ಅರಿವು ಜಾಥಾ ನಡೆಸಿದರು.

ಗ್ರಂಥಾಲಯಗಳು ಜ್ಞಾನಾರ್ಜನೆಯ ಕೇಂದ್ರಗಳಾಗಿವೆ ಎಂದು ಶಾಸಕ ಕೆ.ಮಹದೇವ್ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿರುವ ಸಾರ್ವಜನಿಕ ಗ್ರಂಥಾಲಯದಲ್ಲಿ ನಡೆದ ರಾಷ್ಟಿçÃಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ ಒಟ್ಟು 34 ಗ್ರಾ.ಪಂ.ಗಳಿದ್ದು ಇವುಗಳಲ್ಲಿ ನೂತನವಾಗಿ ಕಾರ್ಯಾರಂಭ ಮಾಡಿರುವ 8 ಗ್ರಾ.ಪಂ ಗಳಲ್ಲಿ ಗ್ರಂಥಾಲಯಗಳಿಲ್ಲ, ಈ ವಿಚಾರವಾಗಿ ಶೀಘ್ರದಲ್ಲೇ ಸಂಬAಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಗ್ರಂಥಾಲಯ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುತ್ತೇನೆ, ಸಾರ್ವಜನಿಕರು ಬಿಡುವಿನ ವೇಳೆಯಲ್ಲಿ ಗ್ರಂಥಾಲಯಗಳಿಗೆ ಭೇಟಿ ನೀಡಿ ಅಲ್ಲಿರುವ ಸುಪ್ರಸಿದ್ದ ಕಾದಂಬರಿಗಳು, ಸಾಹಿತ್ಯ ಪುಸ್ತಕಗಳು ಹಾಗೂ ದಿನಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.
ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕ ಮಂಜುನಾಥ್ ಮಾತನಾಡಿ ಗ್ರಾಮೀಣ ಪ್ರದೇಶಗಳಲ್ಲಿನ ಗ್ರಂಥಾಲಯಗಳ ಅಭಿವೃದ್ದಿಗೆ ಸ್ಥಳೀಯ ಗ್ರಾ.ಪಂ. ಕಚೇರಿ ಆಡಳಿತ ಸಹಕಾರ ನೀಡುವಂತೆ ಕೋರಿದರು. ಪಟ್ಟಣದಲ್ಲಿನ ಗ್ರಂಥಾಲಯವು ಚಿಕ್ಕದಾಗಿದ್ದು ಓದುಗರಿಗೆ ಸ್ಥಳಾವಕಾಶದ ಕೊರತೆಯಿದೆ, ಈ ಬಗ್ಗೆ ಶಾಸಕರು ಗಮನಹರಿಸಿ ಗ್ರಂಥಾಲಯದ ಅಭಿವೃದ್ದಿಗೆ ಸಹಕರಿಸುವಂತೆ ಮನವಿ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಪಟ್ಟಣದ ಗ್ರಂಥಾಲಯ ಪ್ರಭಾರದಾರಕರಾದ ರೇವತಿ, ತಾ.ಪಂ.ಮಾಜಿ ಸದಸ್ಯ ರಘುನಾಥ್, ಪುರಸಭಾ ಮುಖ್ಯಾಧಿಕಾರಿ ಡಿ.ಪುಟ್ಟರಾಜು, ಪುರಸಭಾ ಸದಸ್ಯರಾದ ಕೆ.ಮಹೇಶ್, ಶ್ರೀಮತಿ ರೂಹಿಲ್ಲಾ ಖಾನಂ, ನಿರಂಜನ್, ಉಪನ್ಯಾಸಕ ಪುಟ್ಟಮಾದಯ್ಯ, ಶಿಕ್ಷಕ ಎನ್.ಆರ್.ಕಾಂತರಾಜು, ಸಿಬ್ಬಂದಿ ಶ್ರೀನಿವಾಸ್ ಹಾಗೂ ತಾಲ್ಲೂಕಿನ ವಿವಿಧ ಗ್ರಾ.ಪಂ. ಗ್ರಂಥಾಲಯಗಳ ಮೇಲ್ವಿಚಾರಕರುಗಳು ಹಾಜರಿದ್ದರು.
20ಪಿವೈಪಿ02 : ಪಿರಿಯಾಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ನಡೆದ ರಾಷ್ಟಿçÃಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ ಶಾಸಕ ಕೆ.ಮಹದೇವ್ ಮಾತನಾಡಿದರು.

Leave a Comment

Your email address will not be published. Required fields are marked *

error: Content is protected !!
Scroll to Top