ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾತೃಭಾಷೆಯನ್ನು ಗೌರವಿಸಿ ಕನ್ನಡ ನಾಡುನುಡಿಯ ಬಗ್ಗೆ ಹೆಚ್ಚು ಅಭಿಮಾನ ಬೆಳೆಸಿಕೊಳ್ಳಬೇಕೆಂದು ಶಾಸಕ ಕೆ.ಮಹದೇವ್ ಹೇಳಿದರು.

ಪಟ್ಟಣದ ಪುಷ್ಪ ವಿದ್ಯಾಸಂಸ್ಥೆಯಲ್ಲಿ ತಾಲ್ಲೂಕು ಕಸಾಪ ವತಿಯಿಂದ ಭಾನುವಾರ ನಡೆದ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ತಾಲ್ಲೂಕಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯ ಕನ್ನಡ ಭಾಷೆಯಲ್ಲಿ ಶೇ.100ರಷ್ಟು ಅಂಕ ಪಡೆದಿರುವುದು ಸ್ವಾಗತಾರ್ಹ, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಪ್ರತಿಭಾನ್ವಿತರಿದ್ದು ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿದರೆ ಉತ್ತಮ ಸಾಧನೆ ನಿರೀಕ್ಷಿಸಬಹುದು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲ್ಲೂಕು ರಾಜ್ಯದಲ್ಲೆ 3 ನೇ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡುವಂತೆ ಸಲಹೆ ನೀಡಿದರು.
ಭರವಸೆ : ಕಸಾಪ ವತಿಯಿಂದ ಶಾಸಕರಿಗೆ ಬೇಡಿಕೆ ಸಲ್ಲಿಸಿದ ನಂತರ ಮಾತನಾಡಿದ ಶಾಸಕರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ಗೆ ಪಿರಿಯಾಪಟ್ಟಣದಲ್ಲಿ ಸೂಕ್ತ ನಿವೇ಼ಶನ ನೀಡುವ ಜೊತೆಗೆ ಭವನ ನಿರ್ಮಿಸಲು ಸಹಕಾರದ ಜೊತೆಗೆ ಪಟ್ಟಣದ ಪ್ರಮುಖ ರಸ್ತೆಗಳಿಗೆ ಕನ್ನಡದ ಪ್ರಖ್ಯಾತ ಸಾಹಿತಿಗಳ ಹೆಸರನ್ನಿಡಲು ಕ್ರಮಕೈಗೊಳ್ಳುವ ಭರವಸೆ ನೀಡಿದರು.
ಕಸಾಪ ಜಿಲ್ಲಾಧ್ಯಕ್ಷ ಡಾ.ವೈ.ಡಿ.ರಾಜಣ್ಣ ಮಾತನಾಡಿ ಮನುಷ್ಯ ಜೀವನದಲ್ಲಿ ಉನ್ನತ ಸಾಧನೆ ಮಾಡಲು ಶಿಕ್ಷಣ ಅತ್ಯಗತ್ಯ, ಬಡತನದ ಕಾರಣದಿಂದ ಹಲವು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಅಂತಹವರನ್ನು ಗುರುತಿಸಿ ಸಹಕಾರ ಮತ್ತು ಪ್ರೋತ್ಸಾಹ ನೀಡಿ ಶಿಕ್ಷಣ ಮುಂದುವರಿಸಲು ಯತ್ನಿಸಬೇಕು ಎಂದರು. ತಾಲ್ಲೂಕು ಕಸಾಪ ಘಟಕ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಯಾಗುತ್ತಿದ್ದು, ರಾಜ್ಯದಲ್ಲಿಯೇ ಮಾದರಿಯಾಗಲಿ ಎಂದು ಆಶಿಸಿದರು.
ಕಸಾಪ ತಾಲ್ಲೂಕು ಅಧ್ಯಕ್ಷ ಗೊರಹಳ್ಳಿ ಜಗದೀಶ್ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಅಂಕಗಳಿಕೆಯ ಜೊತೆಗೆ ಮಾನವೀಯ ಸಂಬAಧÀಗಳನ್ನು ಬೆಳಸಿಕೊಂಡು ಕನ್ನಡ ಸಾಹಿತ್ಯ ಹಾಗೂ ಪರಂಪರೆಯ ಬಗ್ಗೆ ಹೆಚ್ಚು ಅಧ್ಯಯನ ಮಾಡಿ ನಾಡು, ನುಡಿಯ ಬಗ್ಗೆ ಗೌರವ ಮನೋಭಾವ ಹೊಂದಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ ಮಾತನಾಡಿ ತಾಲ್ಲೂಕು ಕಸಾಪ ವತಿಯಿಂದ ಮಾತೃಭಾಷೆಯಲ್ಲಿ ಪೂರ್ಣ ಅಂಕ ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುತ್ತಿರುವುದು ಶ್ಲಾಘನೀಯವಾದುದು, ಪ್ರತಿಯೊಬ್ಬರೂ ಕನ್ನಡ ಭಾಷಾಭಿಮಾನವನ್ನು ಹೆಚ್ಚಾಗಿ ರೂಢಿಸಿಕೊಂಡು ನಮ್ಮ ನಾಡಿನ ಗತವೈಭವದ ಸಂಸ್ಕೃತಿ ಪರಂಪರೆಯನ್ನು ವಿಶ್ವದಾದ್ಯಂತ ಪ್ರಚಾರ ಪಡಿಸಬೇಕೆಂದರು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯ ಕನ್ನಡ ಭಾಷೆಯಲ್ಲಿ ಶೇ.100 ಅಂಕ ಪಡೆದ ವಿದ್ಯಾರ್ಥಿಗಳು, ಶಾಲೆಗಳು ಹಾಗೂ ಶಿಕ್ಷಕರು ಮತ್ತು ರಾಷ್ಟçಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ ಪಟ್ಟಣದ ಗ್ರೀನ್‌ಕಿಡ್ಸ್ ಹಾಗೂ ಸಂಕಲ್ಪ ನೃತ್ಯಶಾಲೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ತಾ.ಪಂ.ಅಧ್ಯಕ್ಷೆ ಕೆ.ಆರ್.ನಿರೂಪಾ, ಕೊಡಗು ಜಿಲ್ಲೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಮಂಜುಳ, ನಿವೃತ್ತ ಬಿಇಒ ಆರ್.ಕರೀಗೌಡ, ಪುಷ್ಪ ಶಿಕ್ಷಣ ಸಂಸ್ಥೆ ಪ್ರಾಂಶುಪಾಲ ಫಾ.ಕೆ.ವಿ.ಜಾರ್ಜ್, ರೋಟರಿ ಸಂಸ್ಥೆ ಅಧ್ಯಕ್ಷ ರಮೇಶ್, ಮಾಜಿ ಅಧ್ಯಕ್ಷರಾದ ಡಾ.ಪ್ರಕಾಶ್ ಬಾಬುರಾವ್, ಬಿ.ಆರ್.ಸತೀಶ್, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ನಾಗಶೆಟ್ಟಿ, ರಾಜ್ಯ ಪರಿಷತ್ ಸದಸ್ಯ ಶಿವಯೋಗ, ಸಾಹಿತಿ ಅಂಬ್ಲಾರೆ ಬಸವೇಗೌಡ, ಧರ್ಮಸ್ಥಳ ಸಂಸ್ಥೆಯ ಯೋಜನಾಧಿಕಾರಿ ರಮೇಶ್, ಕಸಾಪ ಪದಾಧಿಕಾರಿಗಳಾದ ಸಿ.ಎನ್.ವಿಜಯ್, ಆಲನಹಳ್ಳಿ ಕೆಂಪರಾಜು, ಮಹದೇವ್, ಟಿ.ಎಸ್.ಹರೀಶ್, ನವೀನ್ ಕುಮಾರ್, ರಾಜು, ಸಿ.ಜೆ.ಪುನೀತ್, ಯೋಗೇಶ್, ಗುರುದತ್ ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರು ಹಾಜರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top