ತಾ.ಪಂ ಕಚೇರಿ ಸಭಾಂಗಣದಲ್ಲಿ ಶನಿವಾರದಂದು ನಡೆದ ಕೆಡಿಪಿ ಸಭೆಯಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸುತ್ತಿದ್ದಾಗ ಆರೋಗ್ಯ, ಅರಣ್ಯ ಮತ್ತು ಪಶು ಇಲಾಖೆ ಪಶು ಇಲಾಖೆ ಮೇಲಧಿಕಾರಿಗಳಿಗೆ ಪತ್ರಿಕೆ ವರದಿಯ ಬಗ್ಗೆ ಪ್ರಸ್ತಾಪಿಸಿ ಮಾಹಿತಿ ಕೇಳಿದರು.
ತಾಲ್ಲೂಕಿನ ನಂದಿನಾಥಪುರ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಬಗ್ಗೆ ಪ್ರಸ್ತಾಪಿಸಿ ತಾಲ್ಲೂಕು ಆರೋಗ್ಯಾಧಿಕಾರಿಗೆ ಮಾಹಿತಿ ಕೇಳಿದಾಗ ತಾಲೂಕು ಆರೋಗ್ಯಾಧಿಕಾರಿ ನಾಗೇಶ್ ಮಾತನಾಡಿ ತಾಲ್ಲೂಕಿನ ವಿವಿಧೆಡೆ ವೈದ್ಯರು ಉನ್ನತ ವ್ಯಾಸಂಗಕ್ಕಾಗಿ ತೆರಳುತ್ತಿದ್ದು ಆ ಸ್ಥಳಗಳಿಗೆ ವೈದ್ಯಾಧಿಕಾರಿಗಳ ನೇಮಕವಾಗಿಲ್ಲ ಮತ್ತು ವಿವಿಧೆಡೆ ಸಿಬ್ಬಂದಿಗಳ ಕೊರತೆಯಿದೆ ಎಂದರು, ಇದಕ್ಕೆ ಶಾಸಕರು ತಾಲ್ಲೂಕಿನ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಕೊರತೆ ಬಗ್ಗೆ ವರದಿ ನೀಡುವಂತೆ ಆದೇಶಿಸಿ ಆರೋಗ್ಯ ಸಚಿವರ ಗಮನಕ್ಕೆ ತರುವುದಾಗಿ ಹೇಳಿದರು.
ಆನೇಚೌಕೂರು ಅರಣ್ಯ ವ್ಯಾಪ್ತಿಯ ಕಾಡಂಚಿನ ನಿವಾಸಿಗಳ ಜಮೀನುಗಳಿಗೆ ಕಾಡಾನೆ ಹಾವಳಿ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ವಲಯ ಅರಣ್ಯಾಧಿಕಾರಿಯವರನ್ನು ಶಾಸಕರು ವರದಿ ಕೇಳಿದಾಗ ವಲಯ ಅರಣ್ಯಾಧಿಕಾರಿ ರತನ್ ಕುಮಾರ್ ಮಾತನಾಡಿ ಆ ವ್ಯಾಪ್ತಿಗಳಲ್ಲಿ ಮುಚ್ಚಿ ಹೋಗಿರುವ ಆನೆ ಕಂದಕಗಳ ದುರಸ್ತಿ ಕರ್ಯ ಪ್ರಗತಿಯಲ್ಲಿದ್ದು ರೈಲ್ವೆ ಬ್ಯಾರಿಕೇಡ್ ಗಳ ನರ್ಮಾಣಕ್ಕೆ ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದರು, ಶಾಸಕರು ಈ ವಿಷಯವನ್ನು ಅರಣ್ಯ ಸಚಿವರ ಗಮನಕ್ಕೆ ತಂದು ಶೀಘ್ರ ಬಗೆಹರಿಸುವುದಾಗಿ ತಿಳಿಸಿದರು.
ಬಾರಸೆ ಗ್ರಾಮದ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳ ಕೊರತೆ ಬಗ್ಗೆ ಪಶು ಇಲಾಖೆಯ ಸಹಾಯಕ ನರ್ದೇಶಕರನ್ನು ಪ್ರಶ್ನಿಸಿದಾಗ ಅವರು ಉತ್ತರಿಸಿ ತಾಲ್ಲೂಕಿನ ವಿವಿಧೆಡೆ ಸಿಬ್ಬಂದಿ ಕೊರತೆ ಇರುವ ಮಾಹಿತಿ ನೀಡಿದಾಗ ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ತಕ್ಷಣ ವರದಿ ನೀಡುವಂತೆ ಕೇಳಿ ಸಂಬಂಧಿಸಿದ ಇಲಾಖೆ ಸಚಿವರ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದರು.
ತಾಲ್ಲೂಕಿನ ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆ ಕುರಿತು ಮುಖ್ಯಮಂತ್ರಿಗಳೊಂದಿಗೆ ವಿಷಯ ಪ್ರಸ್ತಾಪಿಸಿ ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.