ಪಟ್ಟಣದ ಕನ್ನಂಬಾಡಿಯಮ್ಮ ದೇವಾಲಯದ ಬಳಿಯಿಂದ ಕಾರ್ಯಕರ್ತರೊಂದಿಗೆ ಶಾಸಕ ಕೆ.ಮಹದೇವ್ ಮೆರವಣಿಗೆಯಲ್ಲಿ ಸಾಗಿದ ಸಂದರ್ಭದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಜಯಕಾರ ಮೊಳಗಿಸಿ ಹರ್ಷ ವ್ಯಕ್ತಪಡಿಸಿದರು.
ಪಟ್ಟಣದ ಕನ್ನಂಬಾಡಿಯಮ್ಮ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಚಿವರಾದ ಜಿ.ಟಿ.ದೇವೇಗೌಡ ಮತ್ತು ಸಾ.ರಾ.ಮಹೇಶ್ ಅವರ ಕೋರಿಕೆಯಂತೆ ನನಗೆ ನಿಗಮದ ಮಂಡಳಿಯಲ್ಲಿ ಅವಕಾಶ ಕಲ್ಪಿಸಿದ್ದು. ನಷ್ಠದಲ್ಲಿರುವ ನಿಗಮದ ಅಧಿಕಾರ ವಹಿಸಿಕೊಂಡಿದ್ದರೂ ಅದನ್ನು ಲಾಭದ ಹಳಿಗೆ ತರಲು ಯತ್ನಿಸುವುದಾಗಿ ತಿಳಿಸಿದರು. ತಾಲ್ಲೂಕಿಗೆ ಸಿದ್ದ ಉಡುಪು ತಯಾರಿಕೆಯಂತಹ ಕಾರ್ಖಾನೆಯನ್ನು ತೆರೆಯಲು ಉದ್ಯಮಿಗಳ ಮನವೊಲಿಸುವ ಕೆಲಸವನ್ನು ಆದ್ಯತೆಯ ಮೇರೆಗೆ ಮಾಡುವುದಾಗಿ ತಿಳಿಸಿದರು. ಪ್ರತಿ ಜಿಲ್ಲಾ ಕೇಂದ್ರಗಳಿಗೆ ಶಾಶ್ವತ ಹೆಲಿಪ್ಯಾಡ್ ನಿರ್ಮಿಸಿ ಉದ್ಯಮಿಗಳಿಗೆ ಅನುಕೂಲ ಕಲ್ಪಿಸಿಕೊಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮೈಮುಲ್ ನಿರ್ದೇಶಕ ಪಿ.ಎಂ.ಪ್ರಸನ್ನ, ಜಿ.ಪಂ.ಸದಸ್ಯರಾದ ರಾಜೇಂದ್ರ, ಕೆ.ಎಸ್.ಮಂಜುನಾಥ್, ತಾ.ಪಂ.ಸದಸ್ಯರಾದ ಎಸ್.ರಾಮು, ಮಲ್ಲಿಕಾರ್ಜುನ್, ಆರ್.ಎಸ್.ಮಹದೇವ, ಪುರಸಭೆ ಸದಸ್ಯರಾದ ನಿರಂಜನ್, ಮಂಜುನಾಥ್ ಸಿಂಗ್, ಮಹೇಶ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್.ರವಿ ಸೇರಿದಂತೆ ಜೆಡಿಎಸ್ ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು.