ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿಗೆ ಕಲಿಕೆಯತ್ತ ಆಸಕ್ತಿವಹಿಸಿದಾಗ ಮಾತ್ರ ಯಶಸ್ಸು ಕಾಣಬಹುದು ಎಂದು ಶಾಸಕ ಕೆ.ಮಹದೇವ್ ಹೇಳಿದರು.

ಪಟ್ಟಣದ ಡಿಪಿಬಿಎಸ್ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಾಂಸ್ಕೃತಿಕ ಮತ್ತು ಕ್ರೀಡಾಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಸಾಧನೆಯ ಬಗ್ಗೆ ಅಪಾರವಾದ ನಿರೀಕ್ಷೆಯನ್ನು ಹೊಂದಿರುತ್ತಾರೆ, ಅವರ ನಿರೀಕ್ಷೆಗಳು ಹುಸಿಯಾಗದಂತೆ ಉತ್ತಮ ವಿದ್ಯಾಭ್ಯಾಸ ಕಲಿಯುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಕರ್ತವ್ಯವಾಗಿದೆ. ಸರ್ಕಾರದಿಂದ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗಾಗಿ ಹಲವು ಸವಲತ್ತುಗಳನ್ನು ನೀಡಲಾಗುತ್ತಿದ್ದು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳುವಂತೆ ಕರೆನೀಡಿದರು.
ಹುಣಸೂರಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಬಿ.ಎಂ.ನಾಗರಾಜು ಪ್ರಧಾನಭಾಷಣಕಾರರಾಗಿ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯು ಉತ್ತಮ ಸಂಸ್ಕೃತಿಯನ್ನು ಹೊಂದಿದಲ್ಲಿ ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಲು ಸಹಕರಿಯಾಗಲಿದೆ. ಯಶಸ್ಸು ಎಂಬುದು ಪ್ರಯತ್ನ ಎಂಬ ಮೂರು ಅಕ್ಷರಗಳಲ್ಲಿ ಅಡಗಿದ್ದು ಪ್ರತಿಯೊಬ್ಬರು ಪರಿಶ್ರಮದಿಂದ ಸಾಧನೆಯ ಹಾದಿ ಹಿಡಿಯಬೇಕಿದೆ ಎಂದರು. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಗುರುಗಳ ಮೇಲಿನ ಗೌರವ ಕಡಿಮೆಯಾಗುತ್ತಿರುವುದು ವಿಷಾದಕರ ಎಂದರು.
ಕಾರ್ಯಕ್ರಮದಲ್ಲಿ ಮೈಮುಲ್ ನಿರ್ದೇಶಕ ಪಿ.ಎಂ.ಪ್ರಸನ್ನ, ಕಾಲೇಜಿನ ಪ್ರಾಂಶುಪಾಲ ಎನ್.ಎಂ.ವಿಜಯೇAದ್ರಕುಮಾರ್, ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯ ಅಣ್ಣಯ್ಯ ಮಾತನಾಡಿದರು.
ಕಾಲೇಜಿನ ಸಾಂಸ್ಕೃತಿಕ ಕಾರ್ಯದರ್ಶಿ ಆರ್.ನೇತ್ರಾವತಿ ವಾರ್ಷಿಕ ವರದಿ ಓದಿದರು. ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಡಿ.ಪುಟ್ಟರಾಜು, ಕಾಲೇಜಿನ ಅಭಿವೃದ್ದಿ ಸಮಿತಿ ಸದಸ್ಯರಾದ ಎಸ್.ಟಿ.ಮೋಹನ್, ಪಿ.ಬಿ.ಸ್ವಾಮಿ, ಪಿ.ಸಿ.ಕುಮಾರಸ್ವಾಮಿ, ಸಾಜಿದಬಾನು, ಉಪನ್ಯಾಸಕರಾದ ಬಿ.ಎಂ.ಶಿವಸ್ವಾಮಿ, ಸ್ವಾಮಿಗೌಡ, ಆರ್.ವಿನೋದ್‌ಕುಮಾರ್, ಅನಿತಾ, ಮುಖಂಡರಾದ ಅಪೂರ್ವಮೋಹನ್, ರಘುನಾಥ್, ಕುಮಾರ್ ಮತ್ತಿತರರು ಹಾಜರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top