ಹುಣಸೂರಿನಲ್ಲಿ ನೂತನ ವಿಭಾಗವನ್ನು ಆರಂಭಿಸಲು ನಿರ್ಧರಿಸಲಾಗಿದ್ದು ಈ ವ್ಯಾಪ್ತಿಗೆ ಬರುವ ತಾಲ್ಲೂಕು ಕೇಂದ್ರಗಳ ಬಸ್ ಸಮಸ್ಯೆ ಬಗೆಹರಿಯಲಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.

ಪಟ್ಟಣದ ಬಸ್ ಡಿಪೊ ಮತ್ತು ಬಸ್ ನಿಲ್ದಾಣವನ್ನು ಪರಿಶೀಲಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಸುಲಲಿತ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಹೊಸ ಬಸ್‌ಗಳನ್ನು ಖರೀದಿಸಲಾಗುತ್ತಿದ್ದು ಸಿಬ್ಬಂದಿಗಳಿಗೆ ರೂ.೧೪ ಕೋಟಿ ಬೋನಸ್ ನೀಡಲು ನಿರ್ಧರಿಸಲಾಗಿದೆ ಎಂದರು. ಕೆಎಸ್‌ಆರ್‌ಟಿಸಿ ಸಂಸ್ಥೆ ಶೀಘ್ರದಲ್ಲಿ ೬೦೦೦ ಬಸ್‌ಗಳನ್ನು ಖರೀದಿಸಲು ತೀರ್ಮಾನಿಸಲಾಗಿದೆ ಎಂದರು. ಬಸ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ದೂರುಗಳು ಕೇಳಿ ಬಂದಿದ್ದು ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು. ಹುಣಸೂರಿನಲ್ಲಿ ನೂತನ ವಿಭಾಗವನ್ನು ಆರಂಭಿಸಲು ನಿರ್ಧರಿಸಲಾಗಿದ್ದು ಈ ವ್ಯಾಪ್ತಿಗೆ ಬರುವ ತಾಲ್ಲೂಕು ಕೇಂದ್ರಗಳ ಬಸ್ ಸಮಸ್ಯೆ ಬಗೆಹರಿಯಲಿದೆ ಎಂದರು. ಪಿರಿಯಾಪಟ್ಟಣ ಬಸ್ ಡಿಪೊ ಆವರಣವನ್ನು ಸಂಪೂರ್ಣ ಕಾಂಕ್ರೀಟ್‌ಕರಣ ಮಾಡಲಾಗುವುದು ಹಾಗೂ ಡಿಪೊ ಮುಂಭಾಗ ಸಿಬ್ಬಂದಿಗಳಿಗೆ ವಸತಿ ಗೃಹಗಳನ್ನು ನಿರ್ಮಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಸಚಿವರು ನಿಲ್ದಾಣದಲ್ಲಿ ಸ್ವಚ್ಛತೆಯನ್ನು ಕಾಪಾಡ ಬೇಕಾದುದು ಎಲ್ಲರ ಕರ್ತವ್ಯವಾಗಿದ್ದು ಸಾರ್ವಜನಿಕರು ಇದಕ್ಕೆ ಸಹರಿಸುವಂತೆ ತಿಳಿಸಿದರು. ಶೌಚಾಲಯ ಹೋಟೆಲ್‌ಗಳಲ್ಲಿ ಶುಚಿತ್ವ ಕಾಪಾಡುವಂತೆ ಸೂಚಿಸಿದರು. ಪ್ರಯಾಣಿಕರ ಬಸ್ ನಿಲ್ದಾಣದಲ್ಲಿ ಕುಳಿತು ಕೊಳ್ಳಲು ಆಸನಗಳನ್ನು ಹೆಚ್ಚಿಸಲಾಗುವುದು ನಿಲ್ದಾಣದ ನೆಲ ಹಾಸು ಬದಲಿಸಲಾಗುವುದು ಎಂದು ತಿಳಿಸಿದರು.
ಶುದ್ಧ ಕುಡಿಯುವ ನೀರಿನ ಘಟಕವನ್ನು ಕೂಡಲೆ ಸರಿಪಡಿಸುವಂತೆ ಸಂಚಾರ ನಿಯಂತ್ರಕರಿಗೆ ಸೂಚಿಸಿದರು. ಬಸ್ ನಿಲ್ಧಾಣದ ಮುಂಬಾಗದಲ್ಲಿರುವ ಜಾಗವನ್ನು ಎಲ್ಲಾ ಧರ್ಮದವರು ಒಪ್ಪಿಗೆ ನೀಡಿದಲ್ಲಿ ಉದ್ಯಾನವನ ಹಾಗೂ ವಾಹನ ನಿಲುಗಡೆಗೆ ಮತ್ತು ವಾಣಿಜ್ಯ ಮಳಿಗೆ ನಿರ್ಮಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಗ್ರಾಮೀಣ ಭಾಗಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರು ಮನವಿ ಸಲ್ಲಿಸಿದರು ಇದಕ್ಕೆ ಸ್ಪಂದಿಸಿ ಕೂಡಲೆ ಬಸ್ ಸೌಲಭ್ಯ ಕಲ್ಪಿಸುವಂತೆ ಸೂಚಿಸಿದರು.
ಸಿಬ್ಬಂದಿಗಳು ಮತ್ತು ಮೇಲ್ವಿಚಾರಕರ ಕೊರತೆ ನೀಗಿಸುವಂತೆ ಡಿಪೊದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಮನವಿ ಸಲ್ಲಿಸಿದರು. ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕರ್ತವ್ಯ ನಿರ್ವಹಿಸುವ ಗುತ್ತಿಗೆ ನೌಕರರಿಗೆ ಸಂಬಳ ನೀಡಿಲ್ಲವೆಂದು ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಕೆ.ಮಹದೇವ್, ಜಿಲ್ಲಾ ಸಂಚಾರ ನಿಯಂತ್ರಣಾಧಿಕಾರಿ ದಶರಥ್, ಡಿಪೊ ವ್ಯವಸ್ಥಾಪಕ ರಾಮಚಂದ್ರ ದರ್ಶನ್,ಮೈಮುಲ್ ನಿರ್ದೇಶಕ ಪಿ.ಎಂ.ಪ್ರಸನ್ನ, ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿ ಹೇಮಂತ್ ಕುಮಾರ್, ಸಂಚಾರ ನಿಯಂತ್ರಕರಾದ ಎಂ.ಚೆಲುವಯ್ಯ, ಪ್ರಕಾಶ್ ಸೇರಿದಂತೆ ಹಲವರು ಹಾಜರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top