ಅಧಿಕಾರಿಗಳು ಕಚೇರಿಯಲ್ಲಿ ಕೂರದೆ ಗ್ರಾಮಾಂತರ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಉತ್ತಮ ಕರ್ತವ್ಯ ನಿರ್ವಹಿಸುವಂತೆ ಶಾಸಕ ಕೆ.ಮಹದೇವ್ ಹೇಳಿದರು.

ತಾಲೂಕಿನ ಹರದೂರು ಗ್ರಾಮದಲ್ಲಿ ಗ್ರಾಮ ಪರಿಮಿತಿ ರಸ್ತೆ ಅಭಿವೃದ್ಧಿ, ಗುಂಡಿ ಹಳ್ಳ ಗ್ರಾಮದಲ್ಲಿ ಪರಿಶಿಷ್ಟ ಪಂಗಡ ಕಾಲೊನಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ, ಕಂಪಲಾಪುರ ಗ್ರಾಮದಲ್ಲಿ ಗ್ರಾಮ ಪರಿಮಿತಿ ರಸ್ತೆ ಅಭಿವೃದ್ಧಿ ಸೇರಿದಂತೆ ಒಟ್ಟು ರೂ.1.38 ಕೋಟಿ   ಕಾಮಗಾರಿಗಳಿಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು, ತಾಲೂಕಿನಾದ್ಯಂತ ನಡೆಯುವ ಸರ್ಕಾರಿ ಕಾರ್ಯಕ್ರಮಗಳಿಗೆ ಗೈರುಹಾಜರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದರು, ಶಾಸಕನಾಗಿ 1ವರ್ಷ3 ತಿಂಗಳಾಗಿದ್ದು ರಾಜ್ಯದಲ್ಲಿ ಈ ಹಿಂದೆ ಸಮ್ಮಿಶ್ರ ಸರ್ಕಾರವಿದ್ದಾಗ ತಾಲೂಕಿಗೆ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಗೆ ಒತ್ತು ನೀಡಿದ್ದೇ, ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ತಾಲೂಕಿನ ಅಭಿವೃದ್ಧಿಗಾಗಿ ಹೆಚ್ಚು ಅನುದಾನ ತರಲು ಶ್ರಮಿಸಲಾಗುವುದು, ಜನರ ವಿವಿಧ ಬೇಡಿಕೆಗಳು ಬೆಟ್ಟದಷ್ಟಿದೆ ಆದರೆ ಸರ್ಕಾರದಿಂದ ಅನುದಾನವೂ ಕಡಿಮೆ ಪ್ರಮಾಣದಲ್ಲಿ ಬರುತ್ತಿರುವ ಕಾರಣ ಎಲ್ಲಾ ಬೇಡಿಕೆಗಳನ್ನು ಒಂದೇ ಸಾರಿ ಪೂರೈಸಲು ಆಗುವುದಿಲ್ಲ, ಸುಮಾರು 350ಕ್ಕೂ ಅಧಿಕ ಹಳ್ಳಿಗಳಿಂದ ಕೂಡಿರುವ ಈ ತಾಲೂಕಿನ ಪ್ರತಿ ಗ್ರಾಮಗಳಲ್ಲಿ ಹಲವು ಸಮಸ್ಯೆಗಳಿದ್ದು ಹಂತ ಹಂತವಾಗಿ ಅತಿ ಮುಖ್ಯ ಸಮಸ್ಯೆಗಳನ್ನು ಪೂರೈಸಲಾಗುವುದು, ಈ ನಿಟ್ಟಿನಲ್ಲಿ ಗ್ರಾ.ಪಂ ಅಧಿಕಾರಿಗಳು ಸಹಕರಿಸುವಂತೆ ತಿಳಿಸಿದರು.     ಈ ಸಂದರ್ಭ ತಾ.ಪಂ ಇಒ ಡಿ.ಸಿ ಶ್ರುತಿ, ಸದಸ್ಯ ಮಲ್ಲಿಕಾರ್ಜುನ್, ಗ್ರಾ.ಪಂ ಅಧ್ಯಕ್ಷರುಗಳಾದ ರಾಗಿಣಿ, ಆಸಿಫ್ ಖಾನ್, ನಟರಾಜ್, ಉಪಾಧ್ಯಕ್ಷೆ ಜ್ಯೋತಿ ಹಾಗೂ ಸದಸ್ಯರುಗಳು, ಮಾಜಿ ಅಧ್ಯಕ್ಷರುಗಳಾದ ಕೃಷ್ಣೇಗೌಡ, ಗಿರೀಶ್, ಪಿಎಸಿಸಿಎಸ್ ಅಧ್ಯಕ್ಷ ಕೆ.ಕುಮಾರ್, ಪಿಡಬ್ಲ್ಯುಡಿ ಎಇಇ ನಾಗರಾಜ್, ಮುಖಂಡರಾದ ಕೃಷ್ಣೇಗೌಡ, ವಕೀಲ ಹರದೂರು ಜವರೇಗೌಡ, ತಮ್ಮೇಗೌಡ, ದಾಸಪ್ಪ, ಮಹಮ್ಮದ್ ಶಫಿ, ಕಲೀಂ, ವಿವಿಧ ಇಲಾಖೆ ಅಧಿಕಾರಿಗಳು ಗ್ರಾಮಸ್ಥರು ಹಾಜರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top