
ಪಟ್ಟಣದ ತಾಲೂಕು ಆಡಳಿತ ಭವನ ಆವರಣದಲ್ಲಿ ತಾಲೂಕಿನ ವಿವಿಧೆಡೆ ಮುಜರಾಯಿ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಅರ್ಚಕರಿಗೆ ಆಹಾರ ಕಿಟ್ ವಿತರಿಸಿ ಅವರು ಮಾತನಾಡಿದರು, ಲಾಕ್ ಡೌನ್ ಸಂದರ್ಭ ಸಂಕಷ್ಟಕ್ಕೊಳಗಾದ ಕಾಯಕ ಸಮಾಜದ ಕೆಲ ವರ್ಗದವರಿಗೆ ಸರ್ಕಾರ 5ಸಾವಿರ ಪ್ರೋತ್ಸಾಹ ಧನ ನೀಡಿದಂತೆ ಅರ್ಚಕರಿಗೂ ಪ್ರೋತ್ಸಾಹಧನ ನೀಡಿ ಅವರ ಸಂಕಷ್ಟಕ್ಕೆ ಸ್ಪಂದಿಸುವಂತೆ ಆಗ್ರಹಿಸಿದರು, ರಾಜ್ಯದ ವಿವಿಧೆಡೆಯ ಮುಜರಾಯಿ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಅರ್ಚಕರಿಗೆ ದೇವಾಲಯದ ನಿಧಿ ಬಳಸಿಕೊಂಡು ಆಹಾರ ಕಿಟ್ ವಿತರಿಸುತ್ತಿರುವ ಸರ್ಕಾರದ ಕಾರ್ಯ ಶ್ಲಾಘನೀಯ, ಇದರಿಂದ ಆರ್ಥಿಕವಾಗಿ ಸಂಕಷ್ಟಕ್ಕೊಳಗಾಗಿರುವ ಜನಾಂಗವನ್ನು ಪ್ರೋತ್ಸಾಹಿಸಿದಂತಾಗುತ್ತದೆ, ತಾಲೂಕಿನ 175 ದೇವಾಲಯದಲ್ಲಿ ಕರ್ತವ್ಯ ನಿರ್ವಹಿಸುವ ಮುಜರಾಯಿ ಇಲಾಖೆ ಅರ್ಚಕರಿಗೆ ಆಹಾರ ಕಿಟ್ ವಿತರಿಸಲಾಗುತ್ತಿದೆ ಎಂದರು.
ತಹಶೀಲ್ದಾರ್ ಶ್ವೇತಾ ಎನ್ ರವೀಂದ್ರ ಮಾತನಾಡಿ ಸರ್ಕಾರ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಆದೇಶದಂತೆ ತಾಲೂಕಿನಲ್ಲಿ ಮುಜರಾಯಿ ಇಲಾಖೆ ವತಿಯಿಂದ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ದೇವಾಲಯದ ನಿಧಿ ಬಳಸಿ ಆಹಾರ ಕಿಟ್ ವಿತರಿಸಲಾಗುತ್ತಿದೆ ಎಂದರು.
ಈ ಸಂದರ್ಭ ತಾ.ಪಂ ಇಒ ಡಿ.ಸಿ ಶ್ರುತಿ, ಕಂದಾಯ ನಿರೀಕ್ಷಕ ಪಾಂಡುರಂಗ, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.