
ತಾಲೂಕಿನ ತೆಲಗಿನಕುಪ್ಪೆ ಗ್ರಾಮದಲ್ಲಿ ನಡೆದ ಲಕ್ಷ್ಮಿ ವೆಂಕಟಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾಪನಾ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು, ನಂಬಿಕೆ ಮತ್ತು ಧರ್ಮದ ಸಂಕೇತವಾದ ದೇವಾಲಯಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಗ್ರಾಮಸ್ಥರುಗಳು ಒಗ್ಗೂಡಿ ಸಮಿತಿ ರಚಿಸಿಕೊಂಡು ನವೀಕರಣ ಮಾಡಿ ದೇವರನ್ನು ಪ್ರತಿಷ್ಠಾಪಿಸಿರುವುದು ಉತ್ತಮ ಬೆಳವಣಿಗೆಯಾಗಿದೆ, ದೇವಾಲಯಗಳಿಗೆ ಭೇಟಿ ನೀಡುವುದರಿಂದ ಮನಸ್ಸಿಗೆ ಶಾಂತಿ ನೆಮ್ಮದಿ ಸಿಗಲಿದ್ದು ಹಿಂದಿನ ಧರ್ಮ ಸಂಪ್ರದಾಯಗಳನ್ನು ಉಳಿಸಿ ಬೆಳೆಸುವುದು ಭಾರತೀಯರಾದ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಗ್ರಾಮದ ಅಭಿವೃದ್ಧಿಗಾಗಿ ಈಗಾಗಲೇ ಸಾಕಷ್ಟು ಅನುದಾನ ನೀಡಿದ್ದು ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ನೀಡುವುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ದೇವಾಲಯ ಪುನರ್ ನಿರ್ಮಾಣಕ್ಕೆ ಸಹಾಯ ನೀಡಿದ ದಾನಿಗಳನ್ನು ಸಮಿತಿ ವತಿಯಿಂದ ಸನ್ಮಾನಿಸಲಾಯಿತು, ತೆಲಗಿನಕುಪ್ಪೆ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದ ಆಗಮಿಸಿದ್ದ ಸಾವಿರಾರು ಭಕ್ತಾದಿಗಳಿಗೆ ಸಮಿತಿ ವತಿಯಿಂದ ಅನ್ನದಾಸೋಹ ನಡೆಯಿತು.
ಈ ಸಂದರ್ಭ ಜಿ.ಪಂ ಸದಸ್ಯ ಜಯಕುಮಾರ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್ ರವಿ, ತಾ.ಪಂ ಮಾಜಿ ಉಪಾಧ್ಯಕ್ಷ ರಘುನಾಥ್, ಚಿಟ್ಟೇನಹಳ್ಳಿ ಪಿಎಸಿಸಿಎಸ್ ನಿರ್ದೇಶಕ ಸಚ್ಚಿದಾನಂದ, ದೇವಾಲಯ ಸಮಿತಿ ಅಧ್ಯಕ್ಷ ಮಹೇಶ್, ಉಪಾಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ಕೃಷ್ಣ, ಖಜಾಂಚಿ ಯ.ಸ್ವಾಮಿಗೌಡ ಹಾಗೂ ಪದಾಧಿಕಾರಿಗಳು, ಮುಖಂಡರುಗಳಾದ ಟಿ.ಡಿ ನಾಗಣ್ಣ, ಸಣ್ಣತಮ್ಮೇಗೌಡ, ವೆಂಕಟೇಗೌಡರು, ರಾಮೇಗೌಡ, ಮಲ್ಲಪ್ಪ, ಸ್ವಾಮೀಗೌಡ ಜವರೇಗೌಡ ಸೇರಿದಂತೆ ಹಲವರು ಹಾಜರಿದ್ದರು.