
ಈ ವೇಳೆ ಶಾಸಕ ಕೆ.ಮಹದೇವ್ ಮಾತನಾಡಿ ಗ್ರಾಮಾಂತರ ಪ್ರದೇಶಗಳಲ್ಲಿ ಕೊರೋನಾ ವೈರಸ್ ಸೇರಿದಂತೆ ಸಾಂಕ್ರಮಿಕ ಕಾಯಿಲೆಗಳನ್ನು ತಡೆಗಟ್ಟುವ ಸಂಬಂಧ ಅರಿವು ಮೂಡಿಸುವಲ್ಲಿ ಗ್ರಾ.ಪಂಗಳ ಕೆಲಸ ಅತಿ ಮುಖ್ಯವಾಗಿದ್ದು ಪ್ರತಿಯೊಬ್ಬರು ತಮ್ಮ ವ್ಯಾಪ್ತಿಯಲ್ಲಿನ ಎಲ್ಲ ಹಳ್ಳಿಗಳಿಗೆ ಭೇಟಿ ನೀಡಿ ಕೊರೋನಾ ವೈರಸ್ ಹರಡದಂತೆ ತೆಗೆದುಕೊಳ್ಳಬೇಕಾದ ಮುಂಜಾಗೃತ ಕ್ರಮಗಳ ಬಗ್ಗೆ ಎಚ್ಚರ ವಹಿಸುವಂತೆ ಸೂಚಿಸಬೇಕು, ಪ್ರತಿ ಗ್ರಾ.ಪಂ ವ್ಯಾಪ್ತಿಯಲ್ಲಿ ರಾಸಾಯನಿಕ ಔಷಧಿಗಳನ್ನು ಸಿಂಪಡಿಸಿ ಸ್ವಚ್ಛತೆಗೆ ಹೆಚ್ಚು ಒತ್ತು ನೀಡುವಂತೆ ತಿಳಿಸಿದರು. ಬೇಸಿಗೆ ಕಾಲ ಸಮೀಪಿಸುತ್ತಿರುವುದರಿಂದ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು. ಈ ಸಂದರ್ಭ ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ, ತಾ.ಪಂ ಇಒ ಡಿ.ಸಿ ಶ್ರುತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಶ್, ಗ್ರಾಮೀಣಾಭಿವೃದ್ಧಿ ಮತ್ತು ಕುಡಿಯುವ ನೀರು ಇಲಾಖೆಯ ಎಇಇ ಪ್ರಭು, ಸರ್ಕಲ್ ಇನ್ಸ್ಪೆಕ್ಟರ್ ಬಿ.ಆರ್ ಪ್ರದೀಪ್, ತಾ.ಪಂ ಕಚೇರಿ ವ್ಯವಸ್ಥಾಪಕ ಗಜೇಂದ್ರ ಮತ್ತು ಸಿಬ್ಬಂದಿ ಹಾಜರಿದ್ದರು.