
ಪಟ್ಟಣದ ಎಲ್ಲಾ ವಾರ್ಡ್ ನ ನಿರಾಶ್ರಿತರಿಗೆ ದಿನಸಿ ಕಿಟ್ ವಿತರಣೆಗೆ ಹರವೆ ಮಲ್ಲರಾಜಪಟ್ಟಣ ವಾರ್ಡ್ ನಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು, ಕೊರೋನಾ ವೈರಸ್ ನಿಂದ ದೇಶ ಮತ್ತು ರಾಜ್ಯ ಸರ್ಕಾರಗಳ ಬೊಕ್ಕಸಕ್ಕೆ ಆರ್ಥಿಕವಾಗಿ ಹೊಡೆತ ಬಿದ್ದಿದೆ, ದೇಶದಲ್ಲಿ ಲಾಕ್ ಡೌನ್ ನಿರ್ಬಂಧ ಜಾರಿಗೊಳಿಸಿದ್ದರಿಂದ ಕೊರೊನಾ ಸೋಂಕು ಹೆಚ್ಚಾಗಿ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತೆ ಕ್ರಮ ವಹಿಸಿದ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳ ಕ್ರಮ ಶ್ಲಾಘನೀಯ, ಪಟ್ಟಣ ವ್ಯಾಪ್ತಿಯ 23 ವಾರ್ಡ್ ಸೇರಿದಂತೆ ತಾಲೂಕಿನಾದ್ಯಂತ ಸಂಕಷ್ಟ ಪರಿಸ್ಥಿತಿಯ ಕುಟುಂಬಗಳನ್ನು ಗುರುತಿಸಿ ದಿನಸಿ ಕಿಟ್ ವಿತರಿಸಲಾಗುತ್ತಿದೆ ಇದರಲ್ಲಿ ಯಾವುದೇ ಪಕ್ಷ ಅಥವಾ ಜಾತಿ ಭೇದವಿಲ್ಲ ಎಂದರು. ಕೊರೋನಾ ವೈರಸ್ ನಿಂದ ಇಡೀ ವಿಶ್ವವೇ ಸಂಕಷ್ಟದಲ್ಲಿದ್ದು ಅನೇಕ ಸಾವಿರ ಮಂದಿ ಸಾವನ್ನಪ್ಪಿದ್ದು ಇನ್ನೂ ಅನೇಕ ಮಂದಿಗೆ ವೈರಸ್ ಹರಡಿದ್ದು ಇದನ್ನು ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ, ಇದನ್ನು ತಡೆಗಟ್ಟಲು ದೇಶ ವ್ಯಾಪಿ ಹಲವಾರು ಇಲಾಖೆ ಅಧಿಕಾರಿಗಳು ಹೆಚ್ಚು ಶ್ರಮವಹಿಸಿ ಕಾರ್ಯನಿರ್ವಹಿಸಿದ್ದಾರೆ, ಅವರೆಲ್ಲರಿಗೂ ನಾವು ಗೌರವ ಸಲ್ಲಿಸಬೇಕು ಎಂದರು.
ಈ ಸಂದರ್ಭ ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ, ಮೈಮುಲ್ ನಿರ್ದೇಶಕ ಪಿ.ಎಂ ಪ್ರಸನ್ನ, ಸರ್ಕಲ್ ಇನ್ಸ್ಪೆಕ್ಟರ್ ಬಿ.ಆರ್ ಪ್ರದೀಪ್, ಸಬ್ ಇನ್ಸ್ ಪೆಕ್ಟರ್ ಗಣೇಶ್, ಪುರಸಭೆ ಮುಖ್ಯಾಧಿಕಾರಿ ಚಂದ್ರಕುಮಾರ್, ಪುರಸಭೆ ಸದಸ್ಯರುಗಳಾದ ನಿರಂಜನ್, ಪ್ರಕಾಶ್ ಸಿಂಗ್, ಮುಖಂಡ ಅಪೂರ್ವ ಮೋಹನ್ ಹಾಜರಿದ್ದರು.