
ತಾಲ್ಲೂಕಿನ ಬೆಖ್ಯಾ, ತಿಮಕಾಪುರ, ಭೂತನಹಳ್ಳಿ , ಐಲಾಪುರ ಗ್ರಾಮಗಳಲ್ಲಿ 90ಲಕ್ಷ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು, ಅಭಿವೃದ್ಧಿಗೆ ಹಣಕಾಸು ಬಿಡುಗಡೆ ಮಾಡಿದ ತಕ್ಷಣ ಹಂತಹಂತವಾಗಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತದೆ, ನನ್ನ ಶಾಸಕ ಅವಧಿಯಲ್ಲಿ ಪ್ರತಿಯೊಂದು ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳಿಗೆ ಮೊದಲು ಆದ್ಯತೆ ನೀಡುತ್ತೇನೆ, ತಾಲೂಕಿನ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಗಳು ಹಾಳಾಗಿದ್ದು ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ತಂದು ಗ್ರಾಮಾಂತರ ಪ್ರದೇಶಗಳ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುತ್ತೆನೆ ಎಂದರು. ಗ್ರಾಮಸ್ಥರಿಂದ ಕುಡಿಯುವ ನೀರು, ವಿದ್ಯುತ್, ರಸ್ತೆ ಸಂಪರ್ಕ, ರೈತರ ಕುಂದುಕೊರತೆ ಆಲಿಸಿ ಸಮಸ್ಯೆಗೆ ಪರಿಹಾರ ಸೂಚಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಹೇಳಿದರು. ಈ ಸಂದರ್ಭ ತಹಸೀಲ್ ಶ್ವೇತಾ ಎನ್ ರವೀಂದ್ರ, ಇಒ ಡಿ.ಸಿ ಶ್ರುತಿ, ಪಿಡಬ್ಲುಡಿ ಎಇಇ ನಾಗರಾಜ್, ವಿವಿಧ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು