
ಈ ವೇಳೆ ಶಾಸಕರು ಮಾತನಾಡಿ ಕೊರೊನಾ ವಾರಿಯರ್ಸ್ ಗಳಲ್ಲಿ ಒಬ್ಬರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ತಮ್ಮ ಭಾಗದಲ್ಲಿ ಜನರಿಗೆ ಅರಿವು ಮೂಡಿಸುವುದರ ಜೊತೆಗೆ ಹೊರಗಿನಿಂದ ಬಂದವರ ಮಾಹಿತಿ ಪಡೆದು ಅವರು ಮನೆಯಿಂದ ಹೊರ ಬಾರದಂತೆ ಎಚ್ಚರ ವಹಿಸಿ ಆರೋಗ್ಯ ಇಲಾಖೆ ಮಾರ್ಗದರ್ಶನದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಅವರ ಕರ್ತವ್ಯಕ್ಕೆ ಗೌರವ ನೀಡಿ ಸಹಕಾರ ನೀಡುವ ನಿಟ್ಟಿನಲ್ಲಿ ಅವರಿಗೆ ನನ್ನ ಕೈಲಾದ ದಿನಸಿ ಪದಾರ್ಥಗಳನ್ನು ನೀಡುತ್ತಿದ್ದು ಅನ್ಯತಾ ಭಾವಿಸುವುದು ಬೇಡ ಎಂದರು. ಈ ಸಂದರ್ಭ ಸಾರ್ವಜನಿಕ ಆಸ್ಪತ್ರೆ ಮುಖ್ಯ ಆಡಳಿತಾಧಿಕಾರಿ ಡಾ.ಜೆ. ಶ್ರೀನಿವಾಸ್, ತಾಲೂಕು ಆರೋಗ್ಯಾಧಿಕಾರಿ ಡಾ.ನಾಗೇಶ್, ಮೈಮುಲ್ ನಿರ್ದೇಶಕ ಪಿ.ಎಂ ಪ್ರಸನ್ನ, ಆಶಾ ಕಾರ್ಯಕರ್ತೆಯರ ಮೇಲುಸ್ತುವಾರಿ ಅಧಿಕಾರಿ ಹಾಜರಿದ್ದರು.