ನಂತರ ಮಾತನಾಡಿದ ಅವರು ತಾಲೂಕಿನಲ್ಲಿ ಪಾಲಿಟೆಕ್ನಿಕ್ ಕಾಲೇಜು ನಿರ್ಮಾಣಕ್ಕೆ ಚಾಲನೆ ನೀಡಿರುವುದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಅನುಕೂಲವಾಗಲಿದ್ದು ಬಹುದಿನಗಳ ಕನಸು ನನಸಾಗುವ ಸಂದರ್ಭ ಬಂದಿದೆ, ವಿದ್ಯಾರ್ಥಿ ಜೀವನದಲ್ಲಿ ಕಲಿಕೆಯತ್ತ ಹೆಚ್ಚು ಆಸಕ್ತಿ ವಹಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು, ತಾಲೂಕಿನಲ್ಲಿ ಹಂತ ಹಂತವಾಗಿ ನೂತನ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವುದಾಗಿ ಹೇಳಿದರು, ಗುತ್ತಿಗೆದಾರರು ಗುಣಮಟ್ಟದ ಕೆಲಸಕ್ಕೆ ಆದ್ಯತೆ ನೀಡಿ ಕಟ್ಟಡಗಳು ದೀರ್ಘಕಾಲ ಉತ್ತಮವಾಗಿರುವಂತೆ ನಿರ್ಮಿಸಲು ಸೂಚಿಸಿದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶ್ವೇತಾ ಎನ್. ರವೀಂದ್ರ, ತಾ.ಪಂ ಸದಸ್ಯರಾದ ಟಿ.ಈರಯ್ಯ, ಎಸ್. ರಾಮು, ಆರ್.ಎಸ್ ಮಹದೇವ್, ರಂಗಸ್ವಾಮಿ, ಶೋಭಾಚಂದ್ರು, ಮುಖಂಡರಾದ ಅಣ್ಣಯ್ಯ ಶೆಟ್ಟಿ, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ದೇವರಾಜ್, ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಂಶುಪಾಲ ಶ್ರೀಧರ್, ಲೋಕೋಪಯೋಗಿ ಇಲಾಖೆ ಎಇಇ ನಾಗರಾಜ್, ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.