ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಹಾಗೂ ವಾಟರ್ ಮೆನ್ ಗಳಿಗೆ ಅಗತ್ಯ ಪರಿಕರಗಳನ್ನು ವಿತರಿಸಿ ಅವರು ಮಾತನಾಡಿದರು, ಪುರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜು ಹಾಗೂ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಿಂದ ಹಲವು ದೂರುಗಳು ಬರುತ್ತಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿ ಪೌರಕಾರ್ಮಿಕರು ಹಾಗೂ ವಾಟರ್ ಮೆನ್ ಗಳು ಪಟ್ಟಣದಲ್ಲಿ ಹಗಲಿರುಳೆನ್ನದೆ ಕರ್ತವ್ಯ ನಿರ್ವಹಿಸುತ್ತಿದ್ದು ಅವರಿಗೆ ಅಗತ್ಯವಿರುವ ಪರಿಕರಗಳಾದ ರೈನ್ ಕೋಟ್, ಗಂ ಬೂಟ್, ಟಾರ್ಚ್ ಗಳನ್ನು ಪುರಸಭೆಯಿಂದ ವಿತರಿಸಿದರು.
ಪುರಸಭೆಗೆ ಸದಸ್ಯರುಗಳು ಆಯ್ಕೆಯಾಗಿ ವರ್ಷ ಕಳೆಯುತ್ತಿದ್ದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳ ಬಗ್ಗೆ ಮೀಸಲಾತಿಯ ವಿಚಾರ ಇನ್ನೂ ನ್ಯಾಯಾಲಯದಲ್ಲಿರುವುದರಿಂದ ಚುನಾಯಿತ ಪುರಸಭಾ ಸದಸ್ಯರು ಪೂರ್ಣ ಪ್ರಮಾಣದಲ್ಲಿ ಆಡಳಿತ ನಡೆಸಲು ಸಾಧ್ಯವಾಗುತ್ತಿಲ್ಲ, ನಾನು ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನೀಡಿದ ಸಹಕಾರವನ್ನು ಈಗಲೂ ಪುರಸಭೆ ಸಿಬ್ಬಂದಿಗಳು ನೀಡುವಂತೆ ತಿಳಿಸಿ ಮುಂದಿನ ದಿನಗಳಲ್ಲಿ ಪ್ರತಿಯೊಂದು ವಾರ್ಡ್ ಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಕುಂದುಕೊರತೆ ಆಲಿಸಲಾಗುವುದು, ಸಾರ್ವಜನಿಕರಿಂದ ದೂರು ಬಂದಲ್ಲಿ ಸಂಬಂಧಪಟ್ಟ ನೌಕರರನ್ನು ಅಮಾನತು ಮಾಡಲು ಆದೇಶಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭ ಪುರಸಭೆ ಸದಸ್ಯರಾದ ಪಿ.ಸಿ ಕೃಷ್ಣ, ಮಹೇಶ್, ನಿರಂಜನ್, ಪ್ರಕಾಶ್ ಸಿಂಗ್, ಪರಿಸರ ಇಂಜಿನಿಯರ್ ಪ್ರಸನ್ನ, ಆರೋಗ್ಯಾಧಿಕಾರಿ ಆದರ್ಶ, ಸಿಬ್ಬಂದಿ ಜಯರಾಮ್ ಮತ್ತಿತರರು ಹಾಜರಿದ್ದರು.