ಪಟ್ಟಣದ ಗೋಣಿಕೊಪ್ಪ ರಸ್ತೆಯ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 73 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು,
ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹನೀಯರ ತ್ಯಾಗ, ಬಲಿದಾನದ ಹೋರಾಟದ ಮೂಲಕ ಪರಕೀಯರ ಗುಲಾಮಗಿರಿಯ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶ ರಕ್ಷಣೆಗಾಗಿ ಗಡಿಯಲ್ಲಿ ಹಗಲಿರುಳೆನ್ನದೇ ಸೇವೆ ಸಲ್ಲಿಸುತ್ತಿರುವ ಸೈನಿಕರಿಗೆ ನಾಡಿನ ಜನತೆಯ ಪರವಾಗಿ ಗೌರವದ ನಮನಗಳನ್ನು ತಿಳಿಸಿದರು, ಭಾರತೀಯರಾದ ಪ್ರತಿಯೊಬ್ಬರೂ ದೇಶಪ್ರೇಮ ಮೈಗೂಡಿಸಿಕೊಂಡು ಇತರರಿಗೆ ಮಾದರಿಯಾಗಬೇಕು ಎಂದರು.
ತಾಲೂಕನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯಲು ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಿದ್ದು ಇತ್ತೀಚಿನ ನೆರೆ ಪ್ರವಾಹ ಸಂದರ್ಭ ಸಂತ್ರಸ್ತರಿಗೆ ನೆರವಾದ ಪ್ರತಿಯೊಬ್ಬರಿಗೂ ಅಭಿನಂದನೆ ತಿಳಿಸಿ ತಾಲೂಕನ್ನು ನೆರೆಪೀಡಿತ ಪ್ರದೇಶ ಎಂದು ಘೋಷಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಶಾಸಕ ಕೆ.ಮಹದೇವ್ ಮಾತನಾಡಿ ಅಖಂಡ ಭವ್ಯ ಭಾರತದ ದೃಷ್ಟಿಯಿಂದ ಕಾಶ್ಮೀರದಲ್ಲಿ ಆರ್ಟಿಕಲ್ 370 ಮತ್ತು 35 ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಡೆ ಶ್ಲಾಘನೀಯ, ದೇಶದ ಏಕತೆ ಹಾಗೂ ಅಭಿವೃದ್ಧಿಯ ದೃಷ್ಟಿಯಲ್ಲಿ ಪ್ರತಿಯೊಬ್ಬರ ಪಾತ್ರ ಮಹತ್ವದ್ದಾಗಿದ್ದು ನಾವೆಲ್ಲರೂ ಒಂದುಗೂಡಿ ಸರಿಸಮನಾದ ಬದುಕು ನಡೆಸಬೇಕಿದೆ, ದೇಶಕ್ಕೆ ಸ್ವಾತಂತ್ರ್ಯ ಬರಲು ಕಾರಣರಾದ ಮಹನೀಯರು ಹಾಗೂ ಶತ್ರು ರಾಷ್ಟ್ರಗಳ ವಿರುದ್ಧ ಹೋರಾಟ ನಡೆಸುತ್ತಿರುವ ಸೈನಿಕರನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದರು.
ಇದಕ್ಕೂ ಮೊದಲು ತಾಲೂಕು ಆಡಳಿತ ಕಚೇರಿ ಆವರಣದಲ್ಲಿ ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ ಧ್ವಜಾರೋಹಣ ನಡೆಸಿದರು, ವಿವಿಧ ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು, ವಿದ್ಯಾರ್ಥಿಗಳು ರಾಷ್ಟ್ರ ಭಕ್ತರ ಛದ್ಮ ವೇಷದೊಂದಿಗೆ ಆಗಮಿಸಿ ಪ್ರೇಕ್ಷಕರನ್ನು ರಂಜಿಸಿದರು, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ತಾಲೂಕು ಆಡಳಿತ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ತಾ.ಪಂ ಅಧ್ಯಕ್ಷೆ ಕೆ.ಆರ್ ನಿರೂಪ, ಇಒ ಡಿ.ಸಿ ಶೃತಿ, ಜಿ.ಪಂ ಸದಸ್ಯರಾದ ಜಯಕುಮಾರ್, ಮಣಿ, ಕೌಸಲ್ಯ , ತಾ.ಪಂ ಉಪಾಧ್ಯಕ್ಷೆ ಜಯಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಈರಯ್ಯ, ಸದಸ್ಯ ಎಸ್. ರಾಮು, ಟಿಎಪಿಸಿಎಂಎಸ್ ಅಧ್ಯಕ್ಷ ಚಂದ್ರಶೇಖರ್, ಎಪಿಎಂಸಿ ಅಧ್ಯಕ್ಷ ರಾಜಯ್ಯ, ಉಪಾಧ್ಯಕ್ಷ ಮೋಹನ್ ಕುಮಾರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಮಾದೇಗೌಡ, ಉಪಾಧ್ಯಕ್ಷ ಮಣಿಯಯ್ಯ, ಬಿಇಒ ಚಿಕ್ಕಸ್ವಾಮಿ, ವೃತ್ತ ನಿರೀಕ್ಷಕ ಬಿ.ಆರ್ ಪ್ರದೀಪ್, ಪುರಸಭೆ ಹಾಗೂ ತಾ.ಪಂ ಸದಸ್ಯರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.