ಪಿರಿಯಾಪಟ್ಟಣದಲ್ಲಿ ನಡೆದ 71ನೇ ಗಣರಾಜ್ಯೋತ್ಸವ ಕಾರ್ಯಕ್ರಮ

ಸಂವಿಧಾನದ ಅಂಶಗಳು ಸಮರ್ಪಕವಾಗಿ ಜಾರಿಯಾದಾಗ ಮಾತ್ರ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ ಎಂದು ಶಾಸಕ  ಕೆ.ಮಹದೇವ್ ಹೇಳಿದರು.

    ಪಟ್ಟಣದ ಜೂನಿಯರ್ ಕಾಲೇಜು ಆವರಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 71ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು, ಭಾರತ ದೇಶ ಸ್ವತಂತ್ರವಾದಾಗ ಇಡೀ ವಿಶ್ವವೇ ಮೆಚ್ಚುವಂತಹ ಸಂವಿಧಾನ ರಚಿಸಿದ ಕೀರ್ತಿ ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ, ಸರ್ವರಿಗೂ ಸಮಪಾಲು ಸಮಬಾಳು ಎಂಬ ಅಂಶದಡಿ ಭಾರತ ದೇಶದ ಸಂವಿಧಾನ ರಚನೆಯಾಗಿದೆ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ ಬಲಿದಾನ ಮಾಡಿದ ಮಹಾನ್ ನಾಯಕರುಗಳನ್ನು ಸ್ಮರಿಸಿ ಅವರ ಆದರ್ಶ ಗುಣಗಳನ್ನು ಇಂದಿನ ಯುವ ಪೀಳಿಗೆ ಮೈಗೂಡಿಸಿಕೊಂಡು ದೇಶದ ಅಭಿವೃದ್ಧಿಗೆ ಸಹಕರಿಸಬೇಕು, ದೇಶದಲ್ಲಿ ದುಡಿಯುವ ಕೈಗಳಿಗೆ ಉದ್ಯೋಗ ಇಲ್ಲದಂತಾಗಿದ್ದು ಸಮನ್ವಯ ಕೊರತೆಯಿಂದಾಗಿ ಬಡತನ ನಿರುದ್ಯೋಗ ಸಮಸ್ಯೆ ಹೆಚ್ಚಿದೆ, ಧರ್ಮಕ್ಕಿಂತ ದೇಶ ಮೊದಲು ಎಂಬ ಭಾವನೆ ಎಲ್ಲರಲ್ಲೂ ಮೂಡಬೇಕು ಎಂದರು.

    ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ ಮಾತನಾಡಿ ಭಾರತ ದೇಶ ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ, ರಾಷ್ಟ್ರೀಯ ಭಾವೈಕ್ಯತೆ, ಧಾರ್ಮಿಕ ಸಹಿಷ್ಣುತೆ ಹಾಗೂ ವಿವಿಧತೆಯಲ್ಲಿ ಏಕತೆ ಹೊಂದಿದ ರಾಷ್ಟ್ರ ಎಂಬ ಹೆಗ್ಗಳಿಕೆಯನ್ನು ವಿಶ್ವದಲ್ಲಿಯೇ ಪಡೆದಿದೆ, ಸುಭದ್ರ ಭಾರತ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಹಾಗೂ ಯುವ ಜನತೆ ಪಾತ್ರ ಅಪಾರವಾಗಿದ್ದು ಪ್ರತಿಯೊಬ್ಬರೂ ದೇಶಪ್ರೇಮ ಮೈಗೂಡಿಸಿಕೊಳ್ಳುವ ಮೂಲಕ ದೇಶ ಅಭಿವೃದ್ಧಿ ಪಥದಲ್ಲಿ ಸಾಗಲು ಸಹಕರಿಸಬೇಕು ಎಂದರು.

    ವೇದಿಕೆ ಕಾರ್ಯಕ್ರಮಕ್ಕೂ ಮೊದಲು ತಾಲೂಕು ಆಡಳಿತ ಭವನ ಬಳಿ ಹಾಗೂ ಜೂನಿಯರ್ ಕಾಲೇಜು ಮೈದಾನದಲ್ಲಿ ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ ಧ್ವಜಾರೋಹಣ ನೆರವೇರಿಸಿದರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಸಾಮಾಜಿಕ ಪಿಡುಗುಗಳಾದ ಕೌಟುಂಬಿಕ ದೌರ್ಜನ್ಯ ಮತ್ತು ಬಾಲ್ಯ ವಿವಾಹದ ಬಗ್ಗೆ ಅರಿವು ಮೂಡಿಸುವ ಕಿರು ನಾಟಕ ಮತ್ತು ಕೋಲಾಟ ನೃತ್ಯ ಪ್ರದರ್ಶಿಸಿದರು, ವಿವಿಧ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ಛದ್ಮವೇಷ ಹಾಗೂ ದೇಶಭಕ್ತಿ ಗೀತೆಗೆ ಹೆಜ್ಜೆ ಹಾಕಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು, ವಿವಿಧ ಕ್ಷೇತ್ರಗಳಲ್ಲಿ ಸಮಾಜ ಸೇವೆ ಸಲ್ಲಿಸುತ್ತಿರುವ ಗೌರವಿಸಲಾಯಿತು ರಾವಂದೂರಿನ ಕಿರಣ್, ಅಬ್ಬಳತಿ ಹಾಡಿಯ ಜಾನಕಮ್ಮ, ಸಿಸ್ಟರ್ ಸೋನಿಯಾ ಹಾಗೂ ವಿದ್ಯಾರ್ಥಿ ರಿಶಾನಾ ಬೇಗಂ ಅವರನ್ನು ಸನ್ಮಾನಿಸಲಾಯಿತು. 

   ಕಾರ್ಯಕ್ರಮದಲ್ಲಿ ತಾ.ಪಂ ಅಧ್ಯಕ್ಷೆ ಕೆ.ಆರ್ ನಿರೂಪ, ಇಒ ಡಿ.ಸಿ ಶ್ರುತಿ, ಸದಸ್ಯ ಎಸ್.ರಾಮು, ಪುರಸಭೆ ಸದಸ್ಯರಾದ ಪಿ.ಸಿ ಕೃಷ್ಣ, ನಿರಂಜನ್, ಪ್ರಕಾಶ್ ಸಿಂಗ್, ಬಿಇಒ ಚಿಕ್ಕಸ್ವಾಮಿ, ಪುರಸಭೆ ಮುಖ್ಯಾಧಿಕಾರಿ ಚಂದ್ರಕುಮಾರ್, ಪಿಡಬ್ಲ್ಯುಡಿ ಎಇಇ ನಾಗರಾಜ್, ಸಿಡಿಪಿಒ ಕುಮಾರ್, ಮೇಲ್ವಿಚಾರಕಿ ಶ್ವೇತಾ, ಎಸ್ಐ ಗಣೇಶ್ ವಿವಿಧ ಇಲಾಖೆ ಅಧಿಕಾರಿಗಳು ಶಾಲಾ ಕಾಲೇಜು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.  

Leave a Comment

Your email address will not be published. Required fields are marked *

error: Content is protected !!
Scroll to Top