ತಾಲೂಕಿನ ಮುತ್ತೂರು ಗ್ರಾಮದಲ್ಲಿ ರಾಜೀವ್ ಗಾಂಧಿ ಪಂಚಾಯಿತಿ ಸಶಕ್ತೀಕರಣ ಯೋಜನೆಯಡಿ ನೂತನವಾಗಿ ನಿರ್ಮಿಸಲಾಗಿರುವ ಪಂಚಾಯಿತಿ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು, 2014 ರಿಂದ ಸಂಸದನಾಗಿ ಆಯ್ಕೆಯಾದ ನಂತರ ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ 17 ನೂತನ ರಾಜೀವ್ ಗಾಂಧಿ ಸೇವಾ ಕೇಂದ್ರಗಳನ್ನು ನಿರ್ಮಿಸಲಾಗಿದೆ, ನರೇಂದ್ರ ಮೋದಿ ಪ್ರಧಾನಿಯಾದ ನಂತರ 14 ನೇ ಹಣಕಾಸು ಆಯೋಗದ ಯೋಜನೆಯಡಿ ನೇರವಾಗಿ ಗ್ರಾಮ ಪಂಚಾಯಿತಿಗಳಿಗೆ ಅನುದಾನವನ್ನು ನೀಡಲಾಗುತ್ತಿದೆ, ಇದರಿಂದ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ಅಭಿವೃದ್ಧಿಗೆ ಸಹಕಾರವಾಗಲಿದೆ, ಮೈಸೂರು – ಬೆಂಗಳೂರು ನಡುವೆ ಹತ್ತು ಪಥದ ಹೆದ್ದಾರಿ ಯೋಜನೆ ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು ಶ್ರೀರಂಗಪಟ್ಟಣ – ಮಡಿಕೇರಿ ನಡುವೆ ನೂತನ ನಾಲ್ಕು ಪಥದ ಹೆದ್ದಾರಿ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಶಾಸಕ ಕೆ.ಮಹದೇವ್ ಮಾತನಾಡಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಅನುದಾನದಿಂದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ, ಪಿರಿಯಾಪಟ್ಟಣ – ಸಿದ್ದಾಪುರ ರಸ್ತೆ ಅಗಲೀಕರಣಕ್ಕಾಗಿ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಭರವಸೆ ನೀಡಿದರು, ಹಳ್ಳಿಗಳಲ್ಲಿನ ಮೂಲಭೂತ ಸೌಕರ್ಯ ಕೊರತೆ ನೀಗಿಸುವುದೇ ನನ್ನ ಮೊದಲ ಆದ್ಯತೆ ಎಂದರು.
ಈ ಸಂದರ್ಭ ತಾಪಂ ಅಧ್ಯಕ್ಷೆ ನಿರೂಪ, ಜಿ.ಪಂ ಸದಸ್ಯ ಕೆ.ಸಿ ಜಯಕುಮಾರ್, ತಹಶೀಲ್ದಾರ್ ಶ್ವೇತಾ ಎನ್ ರವೀಂದ್ರ, ತಾಪಂ ಇಒ ಡಿ.ಸಿ ಶ್ರುತಿ, ಮುತ್ತೂರು ಗ್ರಾಪಂ ಅಧ್ಯಕ್ಷ ಸುನಂದ, ಉಪಾಧ್ಯಕ್ಷೆ ಸಬಿಹಾಬಾನು, ಪಿಡಿಒ ಮಂಜುನಾಥ್, ಸದಸ್ಯರಾದ ನಂದೀಶ್, ಗೋವಿಂದೆಗೌಡ, ಮೋಹನ್ ಕುಮಾರ್, ಬಶೀರ್ ಅಹ್ಮದ್, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.