ಪಟ್ಟಣದ ತಾಲೂಕು ಆಡಳಿತ ಕಚೇರಿಯಲ್ಲಿ ಕೊರೊನಾ ತಡೆಗಟ್ಟುವಿಕೆ ಸಂಬಂಧ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು, ತಾಲೂಕಿನಲ್ಲಿ ಹೋಂ ಕ್ವಾರಂಟೈನ್ ಇರುವವರ ಮೇಲೆ ಕಂದಾಯ ಮತ್ತು ಆರಕ್ಷಕ ಇಲಾಖೆಯವರು ಸೂಕ್ತ ನಿಗಾವಹಿಸಿ ಅವರು ಮನೆಯಿಂದ ಹೊರ ಬಾರದಂತೆ ಎಚ್ಚರ ವಹಿಸುವಂತೆ ತಿಳಿಸಿದರು, ಮಾಸ್ಕ್ ಮತ್ತು ಸ್ಯಾನಿಟೈಸರ್ ಕೊರತೆ ಇರುವುದಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಖ್ಯ ಆಡಳಿತಾಧಿಕಾರಿ ಡಾ.ಶ್ರೀನಿವಾಸ್ ಸಚಿವರ ಗಮನಕ್ಕೆ ತಂದಾಗ ಜಿಲ್ಲಾ ಆರೋಗ್ಯಾಧಿಕಾರಿ ಅವರಿಗೆ ದೂರವಾಣಿ ಕರೆ ಮಾಡಿ ತಕ್ಷಣ ಪೂರೈಸಿ ಮಾಹಿತಿ ನೀಡುವಂತೆ ಸೂಚಿಸಿದರು, ಕೋರೋನಾ ತಡೆಗಟ್ಟುವ ಸಂಬಂಧ ಭಾರತ ದೇಶ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯ ಮೆಚ್ಚುಗೆ ಸೂಚಿಸಿದ್ದು ಅಮೆರಿಕ ದೇಶಕ್ಕಿಂತಲೂ ಹೆಚ್ಚಿನ ಮುಂಜಾಗ್ರತಾ ಕ್ರಮ ವಹಿಸಲಾಗಿದೆ ಎಂದರು.
ಸಂಸದ ಪ್ರತಾಪ್ ಸಿಂಹ ಮಾತನಾಡಿ ಉಜ್ವಲ ಯೋಜನೆಯಡಿ ಮೂರು ತಿಂಗಳು ಉಚಿತ ಗ್ಯಾಸ್ ವಿತರಣೆಗೆ ತಾಲೂಕು ಆಡಳಿತ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿ ಕೂಲಿ ಕಾರ್ಮಿಕರು ಮತ್ತು ನಿರಾಶ್ರಿತರಿಗೆ ಊಟ ವಸತಿ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಶಾಸಕ ಕೆ.ಮಹದೇವ್ ಮಾತನಾಡಿ ಸರ್ಕಾರದ ಸೂಚನೆಯಂತೆ ತಾಲೂಕಿನಲ್ಲಿ ಕೋರೊನಾ ವೈರಸ್ ತಡೆಗಟ್ಟಲು ತಾಲೂಕು ಆಡಳಿತ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಗ್ರಾಮಾಂತರ ಪ್ರದೇಶದ ಜನರಿಗೆ ಹೆಚ್ಚಿನ ಅರಿವು ಮೂಡಿಸುವಂತೆ ಸೂಚಿಸಿದರು.
ಸಭೆಯಲ್ಲಿ ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ, ತಾ.ಪಂ ಇಒ ಡಿ.ಸಿ ಶ್ರುತಿ, ತಾಲೂಕು ಆರೋಗ್ಯಾಧಿಕಾರಿ ಡಾ.ನಾಗೇಶ್, ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಶ್ರೀನಿವಾಸ, ಪುರಸಭೆ ಮುಖ್ಯಾಧಿಕಾರಿ ಚಂದ್ರಕುಮಾರ್, ಸರ್ಕಲ್ ಇನ್ಸ್ ಪೆಕ್ಟರ್ ಬಿ.ಆರ್ ಪ್ರದೀಪ್, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.