
ಪಟ್ಟಣದ ನೂತನ ಪುರಸಭೆ ಕಟ್ಟಡ ಮುಂಭಾಗ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು, ಉತ್ತಮ ಪರಿಸರವಿದ್ದರೆ ಮನುಷ್ಯರು ಸಹ ಆರೋಗ್ಯಕರ ಜೀವನ ನಡೆಸಬಹುದು, ಪರಿಸರ ನಾಶದಿಂದ ಮನುಷ್ಯ ತನ್ನ ಮನುಕುಲದ ನಾಶಕ್ಕೆ ಮುನ್ನುಡಿ ಬರೆಯುತ್ತಿದ್ದು ಮುಂದಿನ ದಿನಗಳಲ್ಲಾದರೂ ತಮ್ಮ ಸುತ್ತಮುತ್ತಲಿನ ಖಾಲಿ ಜಾಗಗಳಲ್ಲಿ ಸಸಿಗಳನ್ನು ನೆಡುವುದರ ಮೂಲಕ ಉತ್ತಮ ಪರಿಸರ ನಿರ್ಮಾಣಕ್ಕೆ ಮುಂದಾಗಬೇಕು, ಮರ ಗಿಡಗಳಿದ್ದರೆ ವಾತಾವರಣದಲ್ಲಿನ ಏರುಪೇರು ಕಡಿಮೆಯಾಗಿ ಕಾಲ ಕಾಲಕ್ಕೆ ತಕ್ಕಂತೆ ಮಳೆ ಬೆಳೆಯಾಗುತ್ತದೆ, ನಾವು ನೆಟ್ಟ ಸಸಿಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಪರಿಸರ ಮಹತ್ವ ತಿಳಿಸುವಂತೆ ಕೋರಿದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ, ತಾ.ಪಂ ಇಒ ಡಿ.ಸಿ ಶ್ರುತಿ, ಪುರಸಭೆ ಮುಖ್ಯಾಧಿಕಾರಿ ಚಂದ್ರಕುಮಾರ್ ಮತ್ತು ಸಿಬ್ಬಂದಿ, ವಲಯ ಅರಣ್ಯಾಧಿಕಾರಿ ರತನ್ ಕುಮಾರ್, ಪಿಡಬ್ಲ್ಯುಡಿ ಎಇಇ ನಾಗರಾಜ್, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಎಇಇ ಪ್ರಭು, ಬಿಇಒ ಚಿಕ್ಕಸ್ವಾಮಿ, ಪುರಸಭೆ ಸದಸ್ಯರಾದ ಪಿ.ಸಿ ಕೃಷ್ಣ, ಪ್ರಕಾಶ್ ಸಿಂಗ್, ಭಾರತಿ ಮತ್ತಿತರ ಸದಸ್ಯರು ಹಾಜರಿದ್ದರು.