
ತಾಲೂಕಿನ ಬೆಟ್ಟದತುಂಗ-ಹಿರೇಮಳಲಿ ರಸ್ತೆ ಅಭಿವೃದ್ಧಿಗೆ 1ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು, ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ರಸ್ತೆ ಅಭಿವೃದ್ಧಿಗಾಗಿ ಈ ಭಾಗದ ಜನತೆ ಹಲವು ಬಾರಿ ಮನವಿ ಸಲ್ಲಿಸಿದರು, ಗ್ರಾಮೀಣ ಭಾಗದ ಜನತೆ ನೆಮ್ಮದಿಯಿಂದ ಜೀವನ ನಡೆಸಬೇಕು ಎಂದರೆ ಅವರಿಗೆ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು, ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಈ ಹಿಂದೆ ಇದ್ದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಅನುದಾನ ತಂದಿದ್ದು ಸರ್ಕಾರ ಬದಲಾಗಿದ್ದರೂ ಸಹ ಮುಂದಿನ ದಿನಗಳಲ್ಲಿ ತಾಲೂಕಿನ ಅಭಿವೃದ್ಧಿಗಾಗಿ ಹೆಚ್ಚು ಅನುದಾನ ತರಲು ಶ್ರಮಿಸುವುದಾಗಿ ಹೇಳಿದರು.
ಈ ಹಿಂದಿನ ಸಮ್ಮಿಶ್ರ ಸರ್ಕಾರ ತಾಲೂಕಿಗೆ ನೀಡಿದ್ದ ಅನುದಾನದ 150 ಕೋಟಿ ರೂಗಳನ್ನು ತಡೆ ಹಿಡಿದಿರುವ ಬಿಜೆಪಿ ಸರ್ಕಾರಕ್ಕೆ ಅನುದಾನ ಮರು ಬಿಡುಗಡೆಗಾಗಿ ಮನವಿ ಸಲ್ಲಿಸಲಾಗಿದೆ ಎಂದರು.
ಜಿ.ಪಂ ಸದಸ್ಯ ಕೆ.ಎಸ್ ಮಂಜುನಾಥ್ ಮಾತನಾಡಿದರು, ಶಿಕ್ಷಣ ತಜ್ಞ ಟಿ.ಸಿ ವಸಂತರಾಜ್ ಅರಸ್, ತಾ.ಪಂ ಸದಸ್ಯ ಮಲ್ಲಿಕಾರ್ಜುನ, ಇಒ ಡಿ.ಸಿ ಶ್ರುತಿ, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಪ್ರೀತಿ ಅರಸ್, ಮುಖಂಡರಾದ ವಿಜಯರಾಜ್ ಅರಸ್, ಲೋಕೇಶ್, ಪಿಡಬ್ಲ್ಯುಡಿ ಎಇಇ ನಾಗರಾಜ್, ಜಿ.ಪಂ ಎಇಇ ಪ್ರಭು, ಬಿಇಒ ಚಿಕ್ಕಸ್ವಾಮಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್, ಸಾರಿಗೆ ಘಟಕ ವ್ಯವಸ್ಥಾಪಕ ದರ್ಶನ್, ಆರೋಗ್ಯ ಇಲಾಖೆ ಹಿರಿಯ ನಿರೀಕ್ಷಕ ಕೆ.ಆರ್ ಪ್ರಕಾಶ್ ಹಾಗು ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.