ಟೀಕಾಕಾರರಿಗೆ ತಾಲೂಕಿನ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಉತ್ತರ ನೀಡುತ್ತಿದ್ದೇನೆ ಎಂದು ಶಾಸಕ ಕೆ.ಮಹದೇವ್ ಹೇಳಿದರು.

ತಾಲೂಕಿನ ಕಂಪಲಾಪುರ, ಜಿ.ಬಸವನಹಳ್ಳಿ, ಮಾಗಳಿ ಹಾಗೂ ತಿಮಕಾಪುರ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ 1.50 ಕೋಟಿ ವೆಚ್ಚದ ಕಾಮಗಾರಿಗಳಿಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು, ಅಭಿವೃದ್ಧಿ ಕೆಲಸಗಳಲ್ಲಿ ರಾಜಿ ಇಲ್ಲ ಜನರ ವಿಶ್ವಾಸಕ್ಕೆ ಧಕ್ಕೆ ಬರದ ಹಾಗೆ ಕರ್ತವ್ಯ ನಿರ್ವಹಿಸುವೆ, ನನ್ನ ವಿರುದ್ಧ ಅಭಿವೃದ್ಧಿಯ ವಿಚಾರದಲ್ಲಿ ಆರೋಪಗಳನ್ನು ಮಾಡುವವರು ಸಂಬಂಧಿಸಿದ ಇಲಾಖೆಗಳ ಮೂಲಕ ಶಾಸಕನಾಗಿ ಆಯ್ಕೆಯಾದ ಎರಡು ವರ್ಷಗಳಲ್ಲಿ ಸರ್ಕಾರದಿಂದ ಎಷ್ಟು ಹಣ ಮಂಜೂರು ಮಾಡಿ ಅಭಿವೃದ್ಧಿ ಮಾಡಿದ್ದೇನೆ ಎಂಬ ಅಂಕಿ ಅಂಶಗಳನ್ನು ತಿಳಿದು ಮಾತನಾಡಲಿ, ನನ್ನ ಅವಧಿಯಲ್ಲಿ ಯಾವ ಸ್ಥಳಗಳಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇನೆ ಅವುಗಳ ವಿಳಂಬ ಬೇಡ ಎಂದು ಅಧಿಕಾರಿಗಳಿಗೆ ಸೂಚಿಸಿದರು, ಪಿಡಬ್ಲ್ಯುಡಿ ಮತ್ತು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಗಳ ಮೂಲಕ ಹೆಚ್ಚು ಅನುದಾನ ತಂದು ತಾಲೂಕಿನ ಅಭಿವೃದ್ಧಿಗೆ ಶ್ರಮಿಸಿರುವುದಾಗಿ ತಿಳಿಸಿದರು. 

    ಕೊರೊನಾ ಸೋಂಕಿನಿಂದಾಗಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ ಉಂಟಾಗಿದೆ, ವಿಶ್ವದ ಬೇರೆಡೆಗೆ ಹೋಲಿಸಿದರೆ ಭಾರತ ದೇಶದಲ್ಲಿ ನಿರ್ವಹಣೆ ಉತ್ತಮವಾಗಿದೆ, ಸಾರ್ವಜನಿಕರು ಕಡ್ಡಾಯ ಮಾಸ್ಕ್ ಧರಿಸಿ ಸಮುದಾಯ ಅಂತರ ಕಾಪಾಡಿಕೊಂಡು ಸರ್ಕಾರದ ಸೂಚನೆಗಳನ್ನು ಪಾಲಿಸುವಂತೆ ಕೋರಿದರು.

     ಈ ಸಂದರ್ಭ ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಎ.ಟಿ ರಂಗಸ್ವಾಮಿ, ಸದಸ್ಯ ಆರ್.ಎಸ್ ಮಹದೇವ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್ ರವಿ, ಗ್ರಾ.ಪಂ ಅಧ್ಯಕ್ಷರಾದ ಆಸೀಫ್ ಖಾನ್, ರವಿ, ಉಪಾಧ್ಯಕ್ಷೆ ಜಯಮ್ಮ, ಮುಖಂಡರಾದ ಕೆ.ಕುಮಾರ್, ಜಯಣ್ಣ, ಸಚ್ಚಿದಾನಂದ, ತಾ.ಪಂ ಸಹಾಯಕ ನಿರ್ದೇಶಕ ರಘುನಾಥ್, ಪಂಚಾಯತ್ ರಾಜ್ ಇಲಾಖೆ ಎಇಇ ಪ್ರಭು, ಪಿಡಬ್ಲ್ಯುಡಿ ಎಇಇ ಪ್ರಭು, ಬಿಇಒ ಚಿಕ್ಕಸ್ವಾಮಿ,  ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು. 

Leave a Comment

Your email address will not be published. Required fields are marked *

error: Content is protected !!
Scroll to Top