
ತಾಲೂಕಿನ ಆಲನಹಳ್ಳಿ, ದೊಡ್ಡ ಹೊನ್ನೂರು, ಚಿಕ್ಕ ಹೊನ್ನೂರು ಗ್ರಾಮಗಳ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಶಾಸಕನಾಗಿ ಪ್ರದೇಶಾಭಿವೃದ್ಧಿ ನಿಧಿ ಮತ್ತು ಸರ್ಕಾರದ ವಿವಿಧ ಇಲಾಖೆಗಳ ಅನುದಾನವನ್ನು ಸಮರ್ಪಕವಾಗಿ ಹಳ್ಳಿಗಳ ಮತ್ತು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ನನಗೆ ತಾಲ್ಲೂಕಿನ ಸರ್ವ ಪಕ್ಷದ ಮುಖಂಡರು ಮತ್ತು ಜನಪ್ರತಿನಿಧಿಗಳು ಸಹಕರಿಸಬೇಕರಿಸಿದೆ ತಾಲ್ಲೂಕಿನ ಅಭಿವೃದ್ಧಿ ಸಾಧ್ಯ ಎಂದರು. ಈಗಾಗಲೇ ಹಲವು ಹಳ್ಳಿಗಳ ಮೂಲಭೂತ ಸೌಲಭ್ಯಗಳನ್ನು ಈಡೇರಿಸಲು ಕಾಮಗಾರಿಗಳಿಗೆ ಚಾಲನೆ ನೀಡಿದ್ದೇನೆ ಎಂದರು. ಸರ್ಕಾರದಿಂದ ಹೆಚ್ಚಿನ ಅನುದಾನ ತರುವ ಎಲ್ಲಾ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ಆಲನಹಳ್ಳಿ ಗ್ರಾಮವು ಅತಿದೊಡ್ಡ ಗ್ರಾಮವಾಗಿದ್ದು ಹಂತಹಂತವಾಗಿ ಉಳಿದ ರಸ್ತೆಗಳ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ಕೊಟ್ಟು ಅಭಿವೃದ್ಧಿ ಮಾಡಲಾಗುತ್ತವುದು ಎಂದರು. ಯಾವುದೇ ಕಾಮಗಾರಿ ಕಳಪೆಯಾಗಿ ನಿರ್ಮಿಸದೆ ಗುಣಮಟ್ಟ ಕೆಲಸ ಮಾಡಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು. ಬಸವೇಶ್ವರ ದೇವಸ್ಥಾನಕ್ಕೆ 10 ಲಕ್ಷ ಅನುದಾನ ನೀಡುವುದಾಗಿ ಭರವಸೆ ನೀಡಿದರು
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯ ಎ.ಟಿ.ರಂಗಸ್ವಾಮಿ ತಾ.ಪಂ.ಮಾಜಿ ಅಧ್ಯಕ್ಷೆ ಪವಿತ್ರ, ಹುಣಸವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಮಾರ್. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಣೇಶ್. ಹಾಗೂ ತಾಲೂಕಿನ ವಿವಿಧ ಇಲಾಖೆಗಳು ಹಾಜರಿದ್ದರು.
17ಪಿವೈಪಿ01:ಪಿರಿಯಾಪಟ್ಟಣ ತಾಲ್ಲೂಕಿನ ಆಲನಹಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಕೆ.ಮಹದೇವ್ ಶುಕ್ರವಾರ ಚಾಲನೆ ನೀಡಿದರು.