
ಪಟ್ಟಣದ ತಾಲೂಕು ಆಡಳಿತ ಭವನದಲ್ಲಿ ಕೋರೋನಾ ತಡೆಗಟ್ಟುವಿಕೆ ಸಂಬಂಧ ನಡೆದ ಸಭೆಯ ನಂತರ ಅಲ್ಲಿ ಹಾಜರಿದ್ದ ಅಧಿಕಾರಿಗಳು ಹಾಗೂ ಪತ್ರಕರ್ತರಿಗೆ ಸುರಕ್ಷಾ ಪರಿಕರಗಳನ್ನು ವಿತರಿಸಿದ ನಂತರ ಶಾಸಕ ಕೆ.ಮಹದೇವ್ ಮಾತನಾಡಿ ಲಾಕ್ ಡೌನ್ ಸಂದರ್ಭದ ಸುದ್ದಿಗಳನ್ನು ಪತ್ರಿಕೆಯ ಮೂಲಕ ಸಾರ್ವಜನಿಕರಿಗೆ ತಲುಪಿಸುವ ಪತ್ರಕರ್ತರು ಮತ್ತು ಕೊರೊನಾ ಹೋರಾಟದಲ್ಲಿ ಸದಾ ನಿರತರಾಗಿರುವ ಆರೋಗ್ಯ ಇಲಾಖೆಯ ವೈದ್ಯರು ಮತ್ತು ಸಿಬ್ಬಂದಿ, ಆರಕ್ಷಕ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿದಂತೆ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹ ತಮ್ಮ ಆರೋಗ್ಯದ ಬಗ್ಗೆ ಎಚ್ಚರ ವಹಿಸುವಂತೆ ತಿಳಿಸಿ ಸುರಕ್ಷತಾ ಪರಿಕರಗಳನ್ನು ಕಡ್ಡಾಯವಾಗಿ ಧರಿಸುವಂತೆ ಹೇಳಿದರು.
ಈ ಸಂದರ್ಭ ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ, ತಾ.ಪಂ ಇಒ ಡಿ.ಸಿ ಶ್ರುತಿ, ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಖ್ಯ ಆಡಳಿತಾಕಾರಿ ಡಾ.ಶ್ರೀನಿವಾಸ್, ತಾಲೂಕು ಆರೋಗ್ಯಾಧಿಕಾರಿ ಡಾ.ನಾಗೇಶ್, ಸರ್ಕಲ್ ಇನ್ಸ್ಪೆಕ್ಟರ್ ಬಿ.ಆರ್ ಪ್ರದೀಪ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಎಇಇ ಪ್ರಭು, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು