
ಪಟ್ಟಣದ ಟಿಎಪಿಸಿಎಂಎಸ್ ಸಮುದಾಯ ಭವನದಲ್ಲಿ ತಾಲೂಕು ಒಕ್ಕಲಿಗ ವರ್ತಕರ ಸಂಘದಿಂದ ಬಡ ಕುಟುಂಬಗಳಿಗೆ ನೀಡಿದ ಆಹಾರ ಕಿಟ್ ವಿತರಿಸಿ ಅವರು ಮಾತನಾಡಿದರು, ಲಾಕ್ ಡೌನ್ ನಿಂದಾಗಿ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿರುವ ಬಡ ಕುಟುಂಬಗಳು, ನಿರ್ಗತಿಕರು, ಕೂಲಿ ಕಾರ್ಮಿಕರು ಸೇರಿದಂತೆ ವಿವಿಧ ಕುಟುಂಬಗಳಿಗೆ ತಾಲೂಕಿನಾದ್ಯಂತ ವಿವಿಧ ಸಂಘ ಸಂಸ್ಥೆಗಳು ಸಹಾಯದ ಹಸ್ತ ಚಾಚುವ ಮೂಲಕ ಅವರ ನೆರವಿಗೆ ಬರುತ್ತಿರುವುದು ಶ್ಲಾಘನೀಯ ಎಂದರು.
ಈ ವೇಳೆ 200ಕ್ಕೂ ಹೆಚ್ಚು ಆಹಾರ ಕಿಟ್ ವಿತರಿಸಲಾಯಿತು. ಈ ಸಂದರ್ಭ ಪುರಸಭಾ ಸದಸ್ಯ ಮಂಜುನಾಥ್ ಸಿಂಗ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್ ರವಿ, ತಾಲೂಕು ಒಕ್ಕಲಿಗ ವರ್ತಕರ ಸಂಘದ ಪದಾಧಿಕಾರಿಗಳಾದ ಕೃಷ್ಣೇಗೌಡ, ಲವಕುಮಾರ್, ರಾಜೇಗೌಡ, ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.