
ಪಿರಿಯಾಪಟ್ಟಣ ತಾಲೂಕಿನ ವಿವಿಧೆಡೆ ಶಾಸಕ ಕೆ.ಮಹದೇವ್ ಅವರೊಂದಿಗೆ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ವೇಳೆ ಮಾರ್ಗ ಮಧ್ಯೆ ಪಿ.ಬಸವನಹಳ್ಳಿ ಗ್ರಾಮದ ದೇವಾಲಯ ಆವರಣದಲ್ಲಿ ಓದುತ್ತಿದ್ದ ಮಕ್ಕಳನ್ನು ಭೇಟಿ ಮಾಡಿ ಬಿಇಒ ವೈ.ಕೆ ತಿಮ್ಮೇಗೌಡ ಅವರಿಂದ ಮಾಹಿತಿ ಪಡೆದು ಮಾತನಾಡಿದರು, ಗ್ರಾಮಾಂತರ ಪ್ರದೇಶದ ಸರ್ಕಾರಿ ಶಾಲೆಯಲ್ಲಿನ ಶಿಕ್ಷಣ ಪ್ರೋತ್ಸಾಹಿಸಲು ಸರ್ಕಾರ ಹಲವು ಉಚಿತ ಸವಲತ್ತುಗಳನ್ನು ನೀಡುತ್ತಿದ್ದು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ಕಲಿಕೆಗೆ ಹೆಚ್ಚು ಆಸಕ್ತಿ ವಹಿಸುವಂತೆ ತಿಳಿಸಿ ಕೊರೊನಾ ಸೋಂಕಿನ ಹಿನ್ನೆಲೆ ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯ ಪಾಲಿಸುವಂತೆ ತಿಳಿಸಿದರು.
ಈ ಸಂದರ್ಭ ಶಾಸಕ ಕೆ.ಮಹದೇವ್, ಬಿಇಒ ವೈ.ಕೆ ತಿಮ್ಮೇಗೌಡ, ಕೆಡಬ್ಲ್ಯು ಎಸ್ಎಸ್ ಬಿ ನಿರ್ದೇಶಕ ಆರ್.ಟಿ ಸತೀಶ್ ಮತ್ತಿತರರಿದ್ದರು.