ತಾಲೂಕಿನ ವಿವಿಧೆಡೆ 1.82ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು, ತಾಲೂಕಿನ ಪ್ರತಿಯೊಂದು ಹಳ್ಳಿಗಳ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ, ತಾಲೂಕಿನ ಎಲ್ಲಾ ಗ್ರಾಮಗಳ ಮೂಲಭೂತ ಸೌಕರ್ಯ ಹಾಗೂ ಅಭಿವೃದ್ಧಿ ಕಾಮಗಾರಿ ಕೆಲಸಗಳನ್ನು ಹಂತಹಂತವಾಗಿ ಕೈಗೊಳ್ಳಲಾಗುವುದು, ಎರಡು ಬಾರಿ ಚುನಾವಣೆಯಲ್ಲಿ ಸೋತು ಮೂರನೇ ಬಾರಿಗೆ ಶಾಸಕನಾಗಿ ಆಯ್ಕೆಯಾಗಿದ್ದರು ಎಲ್ಲ ಗ್ರಾಮದ ಜನರೊಂದಿಗೆ ವಿಶ್ವಾಸವಿದೆ, ಒಂದೇ ಬಾರಿ ಎಲ್ಲಾ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಪ್ರತಿಯೊಂದು ಗ್ರಾಮಗಳಿಗೂ ಭೇಟಿ ನೀಡಿ ಶಾಲಾ ಕೊಠಡಿ, ಸಿ.ಸಿ ರಸ್ತೆ, ಚರಂಡಿ, ಕುಡಿಯುವ ನೀರು, ವಿದ್ಯುತ್, ಸೇರಿದಂತೆ ಎಲ್ಲ ಸೌಕರ್ಯಗಳು ಸಾರ್ವಜನಿಕರಿಗೆ ದೊರಕುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುತ್ತೇನೆ ಎಂದರು.
ಈ ವೇಳೆ ಗಂಗನಕುಪ್ಪೆ, ರಾಜನ ಬಿಳಗುಲಿ ಗ್ರಾಮದ ಶಾಲಾ ಕೊಠಡಿ ಕಾಮಗಾರಿ, ಅಂಗನವಾಡಿ ಕೊಠಡಿ ಕಾಮಗಾರಿಗೆ ಸೇರಿದಂತೆ ಪಾಕನಕೊಪ್ಪಲು ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಈ ಸಂದರ್ಭ ಪಿಡಬ್ಲ್ಯೂಡಿ ಇಲಾಖೆ ಎಇಇ ನಾಗರಾಜ್, ಎಇ ಬೋರೇಗೌಡ, ಜಿ.ಪಂ ಎಇಇ ಪ್ರಭು, ತಾ.ಪಂ ಸಹಾಯಕ ನಿರ್ದೇಶಕ ರಘುನಾಥ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್,
ಬಿಆರ್ ಸಿ ಲೋಕೇಶ್, ಎಸಿಡಿಪಿಒ ಅಶೋಕ್, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.