
ಹೊನ್ನೇನಹಳ್ಳಿ ಗ್ರಾಮದಲ್ಲಿ 75ಲಕ್ಷ ವೆಚ್ಚದ ಪರಿಶಿಷ್ಟ ಜಾತಿ ಕಾಲೊನಿಗೆ ಮೂಲಭೂತ ಸೌಕರ್ಯ ಕಾಮಗಾರಿ, ಹೆಚ್.ಮಠದ ಕೊಪ್ಪಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 11ಲಕ್ಷ ವೆಚ್ಚದ ಕೊಠಡಿ ನಿರ್ಮಾಣ ಕಾಮಗಾರಿ, ದೊಡ್ಡಬೇಲಾಳು ಗ್ರಾಮದ 15ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ, ಬಿಲ್ಲಹಳ್ಳಿ ಗ್ರಾಮದ 15ಲಕ್ಷ ವೆಚ್ಚದ ಪರಿಶಿಷ್ಟ ಜಾತಿ ಕಾಲೊನಿ ಚರಂಡಿ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಈ ವೇಳೆ ಶಾಸಕ ಕೆ.ಮಹದೇವ್ ಮಾತನಾಡಿ ಈ ಹಿಂದೆ ತಾಲೂಕಿನಲ್ಲಿ ಆಡಳಿತ ನಡೆಸಿದ ಜನಪ್ರತಿನಿಧಿಗಳ ಅಭಿವೃದ್ಧಿ ನಿರ್ಲಕ್ಷ್ಯ ಮನೋಭಾವದಿಂದ ತಾಲೂಕಿನ ಹಲವೆಡೆ ಹಳ್ಳಿಗಳಲ್ಲಿ ಮೂಲಭೂತ ಸೌಕರ್ಯ ಮರೀಚಿಕೆಯಾಗಿವೆ, ಶಾಸಕನಾದ ಎರಡು ವರ್ಷ ಅವಧಿಯಲ್ಲಿ ತಾಲೂಕಿನ ಅಭಿವೃದ್ಧಿಗೆ ಒತ್ತು ನೀಡಿ ಮೂಲಭೂತ ಸೌಕರ್ಯಗಳ ಆದ್ಯತೆ ಕೊರತೆ ಸಾಕಷ್ಟು ನಿವಾರಿಸಿದ್ದೇನೆ, ಕೊರೊನಾ ಸೋಂಕಿನ ಬಗ್ಗೆ ಗ್ರಾಮಾಂತರ ಪ್ರದೇಶದ ಜನರಲ್ಲಿ ನಿರ್ಲಕ್ಷ್ಯ ಭಾವ ಬಾರದೇ ಕಡ್ಡಾಯ ಮಾಸ್ ಧರಿಸಿ ಸಮುದಾಯದ ಅಂತರ ಕಾಪಾಡಿಕೊಂಡು ಸರ್ಕಾರದ ಸೂಚನೆಗಳನ್ನು ಪಾಲಿಸಿ ಸೋಂಕಿನಿಂದ ದೂರವಿರುವಂತೆ ಕೋರಿದರು.
ಈ ಸಂದರ್ಭ ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಎ.ಟಿ ರಂಗಸ್ವಾಮಿ, ಸದಸ್ಯ ಮಲ್ಲಿಕಾರ್ಜುನ್, ಮುಖಂಡರಾದ ಅಣ್ಣಯಶೆಟ್ಟಿ, ರಾಮಚಂದ್ರು, ಮಹದೇವ್, ಗ್ರಾ.ಪಂ ಸದಸ್ಯರು ಮತ್ತು ಮುಖಂಡರುಗಳು,ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಎಇಇ ಪ್ರಭು, ಬಿಇಒ ಚಿಕ್ಕಸ್ವಾಮಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್, ಬಿಸಿಎಂ ವಿಸ್ತರಣಾಧಿಕಾರಿ ಮೋಹನ್ ಕುಮಾರ್ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಹಾಜರಿದ್ದರು.