
ಸಂಸದ ಪ್ರತಾಪ್ ಸಿಂಹ ಮಾತನಾಡಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಈಗಾಗಲೇ 14ನೇ ಹಣಕಾಸು ಯೋಜನೆಯಡಿ ಸಾಕಷ್ಟು ಅನುದಾನ ನೀಡಿದ್ದು ಮುಂಬರುವ 15ನೇ ಹಣಕಾಸು ಯೋಜನೆಯಲ್ಲಿಯೂ ಹೆಚ್ಚಿನ ಅನುದಾನ ನೀಡಲಿದೆ, ಗ್ರಾಮಸ್ಥರ ಮನವಿಯಂತೆ ಗ್ರಾಮದಲ್ಲಿ ಗ್ರಾ.ಪಂ ಕಚೇರಿ ತೆರೆಯಲು ಶಾಸಕ ಕೆ.ಮಹದೇವ್ ಅವರ ಮುಖಾಂತರ ಪ್ರಸ್ತಾವನೆ ಸಲ್ಲಿಸಿದರೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಮುಖಾಂತರ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಇದೇ ವೇಳೆ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡಿದ ದಾನಿಗಳಾದ ಗ್ರಾಮದ ಪರ್ವತಾರಾಧ್ಯ ಅವರನ್ನು ಸಚಿವರು, ಸಂಸದರು, ಶಾಸಕರು ಸನ್ಮಾನಿಸಿದರು. ಗ್ರಾಮಸ್ಥರು ಸಮೀಪದ ಮುತ್ತುರಾಯ ಸ್ವಾಮಿ ದೇವಾಲಯವನ್ನು ಅರಣ್ಯ ಇಲಾಖೆ ಸುಪರ್ದಿಯಿಂದ ಬಿಡಿಸಿಕೊಡುವಂತೆ ಕೋರಿದರು.
ಕಾರ್ಯಕ್ರಮದಲ್ಲಿ ಶಾಸಕ ಕೆ.ಮಹದೇವ್, ಮಾಜಿ ಶಾಸಕ ಎಚ್.ಸಿ ಬಸವರಾಜು, ಜಿ.ಪಂ ಸದಸ್ಯ ಕೆ.ಸಿ ಜಯಕುಮಾರ್, ತಾ.ಪಂ ಅಧ್ಯಕ್ಷೆ ಕೆ.ಆರ್ ನಿರೂಪ, ಸ್ಥಾಯಿ ಸಮಿತಿ ಅಧ್ಯಕ್ಷ ಎ.ಟಿ ರಂಗಸ್ವಾಮಿ, ಚೌತಿ ಗ್ರಾ.ಪಂ ಅಧ್ಯಕ್ಷ ರವಿ ಮತ್ತು ಸದಸ್ಯರು, ಉಪ ವಿಭಾಗಾಧಿಕಾರಿ ವೀಣಾ, ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ, ತಾ.ಪಂ ಇಒ ಡಿ.ಸಿ ಶ್ರುತಿ, ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಸಂದೇಶ್, ನಿರ್ಮಿತಿ ಕೇಂದ್ರದ ಎಇಇ ರಕ್ಷಿತ್, ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಹಾಜರಿದ್ದರು.