
ಈ ವೇಳೆ ಶಾಸಕ ಕೆ.ಮಹದೇವ್ ಮಾತನಾಡಿ ತಾಲೂಕಿನ ಗಡಿ ಭಾಗದಲ್ಲಿ ಕಾವೇರಿ ನದಿ ತೀರದ ಗ್ರಾಮಗಳಲ್ಲಿ ನೆರೆ ಪ್ರವಾಹದಿಂದ ಬೆಳೆ ಹಾನಿಯಾದ ರೈತರು ಮತ್ತು ಮನೆಗಳನ್ನು ಕಳೆದುಕೊಂಡವರಿಗೆ ಶೀಘ್ರ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ಕೋರಿದರು, ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ನಮ್ಮಲ್ಲಿರುವ ಅನುದಾನಕ್ಕಿಂತ ಹೆಚ್ಚಿಗೆ ಬೇಕಾದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ನಿರಾಶ್ರಿತರಿಗೆ ಸೂಕ್ತ ಪರಿಹಾರ ಮತ್ತು ಮಳೆ ನೆರೆ ಹಾನಿಯಿಂದ ಸಂಪೂರ್ಣ ಮನೆ ಕಳೆದುಕೊಂಡವರಿಗೆ ವಸತಿ ನಿಗಮ ವತಿಯಿಂದ ಪರಿಹಾರ ದೊರಕಿಸಿಕೊಡಲಾಗುವುದು ಎಂದರು.
ಈ ಸಂದರ್ಭ ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಡಿವೈಎಸ್ಪಿ ಸುಂದರ್ ರಾಜ್, ಸರ್ಕಲ್ ಇನ್ಸ್ಪೆಕ್ಟರ್ ಬಿ.ಆರ್ ಪ್ರದೀಪ್, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಎ.ಟಿ ರಂಗಸ್ವಾಮಿ, ಸದಸ್ಯರಾದ ಎಸ್.ರಾಮು, ಜಯಂತಿ ಸೋಮಶೇಖರ್ ಹಾಜರಿದ್ದರು.