
ಪಟ್ಟಣದ ಗೋಣಿಕೊಪ್ಪ ರಸ್ತೆಯ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕೊವಿಡ್-19 ಹಿನ್ನೆಲೆ ಸರಳವಾಗಿ ನಡೆದ 74ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು, ಪರಕೀಯರಿಂದ ದೇಶವನ್ನು ಮುಕ್ತಗೊಳಿಸಿ ಸ್ವಾತಂತ್ರ್ಯ ಪಡೆಯಲು ಹೋರಾಡಿದ ಹಲವು ಮಹನೀಯರ ತ್ಯಾಗ ಬಲಿದಾನದ ಸಂಕೇತವಾಗಿ ನಾವಿಂದು ಸ್ವಾತಂತ್ರ್ಯ ಗಳಿಸಿದ್ದೇವೆ ಅವರನ್ನು ನೆನೆದು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು. ಪ್ರತಿ ವರ್ಷ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸುತ್ತಿದ್ದೆವು ಆದರೆ ಈ ಬಾರಿ ಕೊರೊನಾ ಸೋಂಕಿನ ಹಿನ್ನೆಲೆ ಸರಳವಾಗಿ ಆಚರಿಸುತ್ತಿದ್ದೇವೆ, ಪ್ರತಿಯೊಂದು ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜವಾಬ್ದಾರಿಯುತವಾಗಿ ಕೊರೊನಾ ಸೋಂಕಿನ ವಿರುದ್ಧ ಹೋರಾಡಿ ಸಾರ್ವಜನಿಕರ ರಕ್ಷಣೆ ಮಾಡಬೇಕಿದೆ, ಈ ನಿಟ್ಟಿನಲ್ಲಿ ತಾಲೂಕು ಆಡಳಿತದ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉತ್ತಮ ಕರ್ತವ್ಯ ನಿರ್ವಹಿಸಿ ಜಿಲ್ಲೆಯಲ್ಲಿ ಬೇರೆಡೆಗೆ ಹೋಲಿಸಿದರೆ ತಾಲೂಕಿನಲ್ಲಿ ಸೋಂಕು ಹರಡುವುದು ಹತೋಟಿಯಲ್ಲಿದೆ, ಈಚಿನ ದಿನಗಳಲ್ಲಿ ಪಟ್ಟಣ ವ್ಯಾಪ್ತಿಯಲ್ಲಿ ಸೋಂಕು ಹೆಚ್ಚುತ್ತಿದ್ದು ಪುರಸಭೆ ಅಧಿಕಾರಿ ಮತ್ತು ಸಿಬ್ಬಂದಿ ಬೇಜವಾಬ್ದಾರಿ ಪ್ರದರ್ಶಿಸದೆ ಸೋಂಕು ಹೆಚ್ಚು ಹಬ್ಬದಂತೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಶಿಸ್ತು ಕ್ರಮದ ಎಚ್ಚರಿಕೆ ನೀಡಿದರು. ಈ ಹಿಂದೆ ತಾಲೂಕಿನಲ್ಲಿ ನಡೆದ 50ನೇ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಸಂಭ್ರಮದಿಂದ ಆಚರಿಸಲಾಗಿತ್ತು ಮುಂಬರುವ 75ನೇ ಸ್ವಾತಂತ್ರ್ಯ ದಿನದೊಳಗೆ ಕೊರೊನಾ ಸೋಂಕು ವಿಶ್ವದಿಂದ ದೂರವಾಗಿ ಅದ್ಧೂರಿಯಾಗಿ ಆಚರಿಸುವಂತಾಗಲಿ ಎಂದರು.
ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ ಧ್ವಜ ಸಂದೇಶ ನೀಡಿದರು, ಬಿಇಒ ವೈ.ಕೆ ತಿಮ್ಮೇಗೌಡ ಸ್ವಾಗತ ಕೋರಿದರು, ತಾಲೂಕು ಆಡಳಿತ ವತಿಯಿಂದ ಕೊರೊನಾ ವಾರಿಯರ್ಸ್ ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಡಾ. ರವಿಕುಮಾರ್, ಕೆ.ಆರ್ ಪ್ರಕಾಶ್, ಪಿ.ಪಿ ಲತಾ, ಆರಕ್ಷಕ ಇಲಾಖೆಯ ದಿಲೀಪ್, ಶತ್ರುಘ್ನ, ಪುರಸಭೆಯ ಪ್ರದೀಪ್, ಆದರ್ಶ್, ಪಿಡಿಒ ಮೋಹನ್, ಗ್ರಾಮ ಲೆಕ್ಕಿಗ ಉಮೇಶ್, ಮುಖ್ಯಮಂತ್ರಿಗಳ ಪದಕಕ್ಕೆ ಪಾತ್ರವಾಗಿರುವ ಸರ್ಕಲ್ ಇನ್ಸ್ ಪೆಕ್ಟರ್ ಬಿ.ಆರ್ ಪ್ರದೀಪ್, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಬೆಟ್ಟದಪುರ ಎಸ್ಎಂಎಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಬಿ.ಎಂ ಇಂಚರ, ಆರ್.ವಿ ಹಂಸ ಮತ್ತು ತೃತೀಯ ಸ್ಥಾನ ಪಡೆದ ಮಾಕೋಡು ಪ್ರೌಢಶಾಲೆ ವಿದ್ಯಾರ್ಥಿನಿ ಎಂ.ಅಪೇಕ್ಷ ಮತ್ತು ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ತಾ.ಪಂ ಅಧ್ಯಕ್ಷೆ ಕೆ.ಆರ್ ನಿರೂಪ, ಇಒ ಡಿ.ಸಿ ಶೃತಿ, ಶಿರೆಸ್ತೆದಾರ್ ಶಕೀಲಾ ಬಾನು, ಉಪತಹಸೀಲ್ದಾರ್ ಟ್ರೀಜಾ, ಸ್ಥಾಯಿ ಸಮಿತಿ ಅಧ್ಯಕ್ಷ ಎ.ಟಿ ರಂಗಸ್ವಾಮಿ, ಪುರಸಭೆ ಸದಸ್ಯರಾದ ನಿರಂಜನ್, ಶ್ವೇತಾ ಕುಮಾರ್, ನೂರ್ ಜಹಾನ್, ವಿವಿಧ ಇಲಾಖೆ ಅಧಿಕಾರಿಗಳಾದ ನಾಗರಾಜ್, ಪ್ರಭು, ಶಿವಕುಮಾರ್, ಸಂದೇಶ್, ಎಂ.ಕೆ ಪ್ರಕಾಶ್, ರತನ್ ಕುಮಾರ್, ಸಿದ್ದರಾಜು, ಜಮೀರ್ ಅಹ್ಮದ್, ಪುಟ್ಟರಾಜು, ರಘುಪತಿ ಸೇರಿದಂತೆ ಮತ್ತಿತರರು ಹಾಜರಿದ್ದರು.