
ತಾಲೂಕಿನ ಹಿಟ್ನಳ್ಳಿ ಗ್ರಾಮದಲ್ಲಿ ಬೆಳೆ ಸಮೀಕ್ಷೆ-2020 ಉತ್ಸವದ ಪ್ರಚಾರ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು, ರೈತರ ಅನುಕೂಲಕ್ಕಾಗಿ ಸರ್ಕಾರ ಹಲವು ನೂತನ ಯೋಜನೆಗಳನ್ನು ಜಾರಿ ತರುತ್ತಿದ್ದು ಈ ಬಾರಿ ಮೊಬೈಲ್ ಆಪ್ ಮೂಲಕ ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಮಾಹಿತಿ ನೀಡಬಹುದಾಗಿದೆ, ಈ ಕೆಲಸವನ್ನು ರೈತರೇ ತಮ್ಮ ಮೊಬೈಲ್ ಆಪ್ ಮೂಲಕ ನಿರ್ವಹಿಸುವುದರಿಂದ ಪಹಣಿಯಲ್ಲಿ ತಮ್ಮ ವಾರ್ಷಿಕ ಬೆಳೆಗಳ ಮಾಹಿತಿಯನ್ನು ನಮೂದಿಸಲು ಸಹಕಾರಿಯಾಗಲಿದೆ, ಬೆಳೆಗಳು ನಷ್ಟ ಉಂಟಾದ ಸಂದರ್ಭ ಸಹ ಪರಿಹಾರ ಪಡೆಯಲು ಬೆಳೆ ಸಮೀಕ್ಷೆಯ ಮೊಬೈಲ್ ಆಪ್ ಸಹಕಾರಿಯಾಗಲಿದ್ದು ಎಲ್ಲ ರೈತರು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್ ಮಾತನಾಡಿ ರೈತರು ತಮ್ಮ ಆಂಡ್ರಾಯ್ಡ್ ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆಯ ಆಪ್ ಡೌನ್ಲೋಡ್ ಮಾಡಿಕೊಂಡು ತಾವುಗಳು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಮಾಹಿತಿಯನ್ನು ನಮೂದಿಸುವುದರಿಂದ ಇಲಾಖೆಯಿಂದ ರೈತರಿಗೆ ನೀಡುವ ಹಲವು ಸೌಲಭ್ಯಗಳ ವಿತರಣೆಗೆ ಸಹಕಾರಿಯಾಗಲಿದೆ ಎಂದರು. ಈ ಸಂದರ್ಭ ತಾ.ಪಂ ಇಒ ಡಿ.ಸಿ ಶ್ರುತಿ, ಪಿಡಬ್ಲ್ಯುಡಿ ಎಇಇ ನಾಗರಾಜ್, ಕೃಷಿ ಅಧಿಕಾರಿ ಮಹೇಶ್, ವಿವಿಧ ಇಲಾಖೆ ಅಧಿಕಾರಿ ಮತ್ತು ಜನಪ್ರತಿನಿಧಿಗಳು ಹಾಜರಿದ್ದರು.