ಸಮಾಜದ ಅಭಿವೃದ್ಧಿಗಾಗಿ ಉತ್ತಮ ವಿದ್ಯಾರ್ಥಿಗಳನ್ನು ರೂಪಿಸುವ ಶಿಕ್ಷಕರ ಕೊಡುಗೆ ಸ್ಮರಣೀಯ ಎಂದು ಶಾಸಕ ಕೆ.ಮಹದೇವ್ ಹೇಳಿದರು.

ಕೊರೊನಾ ಸೋಂಕಿನ ಹಿನ್ನೆಲೆ ಪಟ್ಟಣದ ಪುಷ್ಪ ವಿದ್ಯಾಸಂಸ್ಥೆಯಲ್ಲಿ ತಾಲೂಕು ಶಿಕ್ಷಣ ಇಲಾಖೆ ವತಿಯಿಂದ ಸರಳವಾಗಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು, ಶಿಕ್ಷಣದ ಪ್ರಗತಿಯ ಮೂಲಕ ಉತ್ತಮ ವಿದ್ಯಾವಂತರನ್ನು ಹೊಂದುವ ರಾಷ್ಟ್ರಗಳು ಅಭಿವೃದ್ಧಿಯತ್ತ ಯಶಸ್ವಿಯಾಗಿ ಮುನ್ನಡೆದಿವೆ, ಶೈಕ್ಷಣಿಕ ಸಾಧನೆಯಲ್ಲಿ ಭಾರತ ದೇಶ ಸಹ ಮುನ್ನುಗ್ಗುತ್ತಿರುವುದು ಶ್ಲಾಘನೀಯ, ಎಸ್ಸೆಸ್ಸೆಲ್ಸಿ  ಫಲಿತಾಂಶದಲ್ಲಿ ಕಳೆದ ಏಳು ವರ್ಷಗಳಿಂದ ತಾಲೂಕು ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಕಾಯ್ದುಕೊಳ್ಳುತ್ತಿದ್ದು ಇದಕ್ಕೆ ಶಿಕ್ಷಕರ ಉತ್ತಮ ಬೋಧನೆ ಜೊತೆಗೆ ವಿದ್ಯಾರ್ಥಿಗಳ ಕಲಿಕೆಯ ಪರಿಶ್ರಮ ಕಾರಣವಾಗಿದೆ, ಇತ್ತೀಚೆಗೆ ಪ್ರಕಟಗೊಂಡ ಯುಪಿಎಸ್ ಸಿ ಫಲಿತಾಂಶದಲ್ಲಿ ತಾಲೂಕಿನ ಮೇಘನ ಮತ್ತು ಪ್ರಜ್ವಲ್ ಎಂಬುವರು ಉತ್ತಮ ಫಲಿತಾಂಶದ ಮೂಲಕ ತಾಲೂಕಿಗೆ ಕೀರ್ತಿ ತಂದಿದ್ದಾರೆ ಎಂದು ಪ್ರಶಂಸಿಸಿದರು, ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು ಗುರುಭವನದ ಕಾಮಗಾರಿ ಪ್ರಾರಂಭಿಸುವಲ್ಲಿ ಎಲ್ಲರೂ ಆಸಕ್ತಿ ವಹಿಸಿ ಎಂದರು.

    ಬಿಇಒ ವೈ.ಕೆ ತಿಮ್ಮೇಗೌಡ ಮಾತನಾಡಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕ ವೃತ್ತಿಗೆ ಸಮಾಜದಲ್ಲಿ ಉತ್ತಮ ಗೌರವವಿದೆ, ತಾಲೂಕಿನ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಶಾಸಕರು ಅನುದಾನ ಮಂಜೂರು ಮಾಡಿಸಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದು  ಸಂತಸಕರ ಎಂದರು.  

  ತಾ.ಪಂ ಅಧ್ಯಕ್ಷೆ ಕೆ.ಆರ್ ನಿರೂಪ ಮಾತನಾಡಿ ಮಕ್ಕಳ ವಿಶೇಷ ಪ್ರತಿಭೆ ಗುರುತಿಸಿ ಸಮಾಜದಲ್ಲಿ ಮಾದರಿ ಮಾಡುವಲ್ಲಿ ಶಿಕ್ಷಕರ ಪಾತ್ರ ಶ್ಲಾಘನೀಯ ಎಂದರು.  ಕಾರ್ಯಕ್ರಮದಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಈಚೆಗೆ ನಿಧನರಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಸಂತಾಪ ಸೂಚಿಸಲಾಯಿತು.    ಜಿ.ಪಂ ಸದಸ್ಯೆ ಕೌಸಲ್ಯ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಎ.ಟಿ ರಂಗಸ್ವಾಮಿ, ಸದಸ್ಯ ಮೋಹನ್ ರಾಜ್, ಪುಷ್ಪ ವಿದ್ಯಾಸಂಸ್ಥೆ ಪ್ರಾಂಶುಪಾಲ ಫಾದರ್ ಜಾರ್ಜ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ್ ಕುಮಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ನಾಗಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ್ ಕುಮಾರ್, ಶಿಕ್ಷಣ ಇಲಾಖೆಯ ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ವೆಂಕಟೇಶ್, ಶಿವಮೂರ್ತಿ, ಪುಟ್ಟರಾಜು, ಸುರೇಶ್, ಸ್ಟೆಲ್ಲಾ ಮೇರಿ, ಜಗದೀಶ್, ದೈಹಿಕ ಶಿಕ್ಷಣ ಪರಿವೀಕ್ಷಕ ರಘುಪತಿ, ಬಿಆರ್ ಸಿ ಗಳಾದ ಲೋಕೇಶ್, ರಾಜಯ್ಯ ಮತ್ತಿತರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top