
ಸೋಮವಾರ ತಾಲೂಕಿನ ವಿವಿಧೆಡೆ 99ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು, ಗ್ರಾಮೀಣ ಪ್ರದೇಶಗಳಲ್ಲಿನ ಸಾರ್ವಜನಿಕರ ಹಿತ ಕಾಪಾಡಲು ಸ್ವಚ್ಛತೆ, ಶುದ್ಧ ಕುಡಿಯುವ ನೀರು ಪೂರೈಕೆ, ಸಮರ್ಪಕ ವಿದ್ಯುತ್ ಸರಬರಾಜಿಗೆ ಸ್ಥಳೀಯ ಮಟ್ಟದ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಿ ಸಾರ್ವಜನಿಕ ಸಮಸ್ಯೆಗಳಿಗೆ ಸೇವಾ ಮನೋಭಾವದಿಂದ ಸ್ಪಂದಿಸುವ ಮನೋಭಾವ ಹೊಂದಬೇಕು, ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಿಸಲಾಗುತ್ತಿರುವ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಗಮನಿಸಬೇಕಾದುದು ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳ ಕರ್ತವ್ಯವಾಗಿದ್ದು ಚರಂಡಿಗಳಲ್ಲಿ ನೀರು ನಿಂತರೆ ಸೊಳ್ಳೆ ಉತ್ಪಾದನೆಯಾಗಿ ರೋಗರುಜಿನಗಳಿಗೆ ಕಾರಣವಾಗಲಿದೆ ಎಂದರು, ಮಳೆಯಿಂದಾಗಿ ಹಾನಿಗೀಡಾಗಿರುವ ಮನೆಗಳ ಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗದಂತೆ ಎಚ್ಚರ ವಹಿಸಲು ಸೂಚಿಸಿದರು, ಮುಂಬರುವ ಎಲ್ಲಾ ಚುನಾವಣೆಗಳಿಗೆ ಒಂದೇ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ಕೇಂದ್ರ ಸರ್ಕಾರವು ಸೂಚನೆ ನೀಡುತ್ತಿದ್ದು ಅಗತ್ಯವಿರುವೆಡೆ ಹೆಚ್ಚಿನ ಮತಗಟ್ಟೆಗಳನ್ನು ತೆರೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.
ಈ ವೇಳೆ ಅತ್ತಿಗೋಡು, ಸಂಗರಶೆಟ್ಟಹಳ್ಳಿ, ಬೆಟ್ಟದಪುರ ಗ್ರಾಮಗಳ ಸರ್ಕಾರಿ ಶಾಲೆಯ ನೂತನ ಕೊಠಡಿಗಳ ನಿರ್ಮಾಣ ಹಾಗೂ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು.
ಈ ಸಂದರ್ಭ ಜಿ.ಪಂ ಸದಸ್ಯ ಕೆ.ಎಸ್ ಮಂಜುನಾಥ್, ತಾ.ಪಂ ಸದಸ್ಯ ಮಲ್ಲಿಕಾರ್ಜುನ, ಇಒ ಡಿ.ಸಿ ಶ್ರುತಿ, ಬಿಇಒ ವೈ.ಕೆ ತಿಮ್ಮೇಗೌಡ, ಪಿಡಬ್ಲ್ಯುಡಿ ಎಇಇ ನಾಗರಾಜು, ಜಿ.ಪಂ ಎಇಇ ಪ್ರಭು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್, ಸಮಾಜ ಕಲ್ಯಾಣಾಧಿಕಾರಿ ಸಿದ್ದೇಗೌಡ, ಬಿಸಿಎಂ ವಿಸ್ತರಣಾಧಿಕಾರಿ ಮೋಹನ್ ಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು, ಗ್ರಾಮಸ್ಥರು ಹಾಜರಿದ್ದರು.