
ತಾಲೂಕಿನ ವಿವಿಧ ಗ್ರಾಮಗಳಲ್ಲಿ ರೂ.80ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು, ಅಭಿವೃದ್ಧಿ ವಿಚಾರದಲ್ಲಿ ಜಾತಿ ರಾಜಕಾರಣ ಮಾಡಲ್ಲ, ತಾಲೂಕಿನ ಎಲ್ಲ ವರ್ಗಗಳ ಅಭಿವೃದ್ಧಿಗೆ ಬದ್ಧನಾಗಿದ್ದೇನೆ, ಮತದಾರರು ಅವರ ಮಾತಿಗೆ ಮರುಳಾಗಿ ಅಲ್ಪ ಮತಗಳಿಂದ ಸೋಲು ಅನುಭವಿಸಿದೆ, ಮೂರನೇ ಬಾರಿ ತಾಲೂಕಿನ ಜನತೆಯ ಆಶೀರ್ವಾದದಿಂದ ಶಾಸಕನಾಗಿ ಆಯ್ಕೆಯಾಗಿದ್ದು ತಾಲೂಕಿನ ಎಲ್ಲ ಗ್ರಾಮಗಳ ಅಭಿವೃದ್ಧಿಯೇ ನನ್ನ ಮೊದಲ ಗುರಿ ಎಂದರು.
ಮಾಕೋಡು ಗ್ರಾ.ಪಂ ವ್ಯಾಪ್ತಿಯ ಎಲ್ಲ ಹಳ್ಳಿಗಳ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ನೀಡಿದ್ದು ಮುಂದಿನ ದಿನಗಳಲ್ಲಿಯೂ ಅನುದಾನ ನೀಡುವ ಭರವಸೆ ನೀಡಿ ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕೆಲಸ ನಿರ್ವಹಿಸಿ ಕಾಮಗಾರಿಗಳು ದೀರ್ಘಕಾಲ ಬಾಳುವಂತೆ ಸೂಚಿಸಿದರು.
ಈ ವೇಳೆ ಎಂ.ಶೆಟ್ಟಹಳ್ಳಿ ಕೊಪ್ಪಲು, ಗಂಗೂರು ಸೀಗಡಿಕಟ್ಟೆ ಮತ್ತು ಆರ್.ಹೊಸಹಳ್ಳಿ ಗ್ರಾಮಗಳಲ್ಲಿ ತಲಾ 20ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಚಾಲನೆ ನೀಡಿದರು.
ಈ ಸಂದರ್ಭ ತಾ.ಪಂ ಇಒ ಡಿ.ಸಿ ಶ್ರುತಿ, ಉಪಾಧ್ಯಕ್ಷೆ ಜಯಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಎ.ಟಿ ರಂಗಸ್ವಾಮಿ, ಸದಸ್ಯ ಎಸ್.ರಾಮು, ಮಾಜಿ ಅಧ್ಯಕ್ಷ ಜವರಪ್ಪ, ಮಾಕೋಡು ಗ್ರಾ.ಪಂ ಅಧ್ಯಕ್ಷೆ ರುಕ್ಮಿಣಮ್ಮ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಎಇಇ ಪ್ರಭು, ಎಇ ಆಲಿ, ಪಿಡಬ್ಲ್ಯುಡಿ ಎಇ ದಿನೇಶ್, ಗ್ರಾಮೀಣಾಭಿವೃದ್ಧಿ ಮತ್ತು ಶುದ್ಧ ಕುಡಿಯುವ ನೀರು ಇಲಾಖೆ ಎಇಇ ಶಿವಕುಮಾರ್, ಎಇ ಇದ್ರಿಸ್, ಚೆಸ್ಕಾಂ ಎಇಇ ಕುಮಾರ್, ವಿವಿಧ ಇಲಾಖೆ ಅಧಿಕಾರಿ ಮತ್ತು ಜನಪ್ರತಿನಿಧಿಗಳು ಹಾಜರಿದ್ದರು.