
ತಾಲೂಕಿನ ಅಂಕನಹಳ್ಳಿ ಕೊಪ್ಪಲು ಗ್ರಾಮದ ಅಲ್ಪಸಂಖ್ಯಾತರ ಕಾಲೊನಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕರು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವತಿಯಿಂದ ಅನುದಾನ ತಂದು ತಾಲೂಕಿನ ವಿವಿಧೆಡೆ ಅಲ್ಪಸಂಖ್ಯಾತರು ವಾಸಿಸುವ ಗ್ರಾಮಗಳ ಮೂಲಭೂತ ಸೌಲಭ್ಯ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಈಗಾಗಲೇ 3 ಕೋಟಿ ಹಣ ಮಂಜೂರು ಮಾಡಿಸಿ ಹಂತಹಂತವಾಗಿ ಕಾಮಗಾರಿಗಳ ಅಭಿವೃದ್ಧಿಗೆ ಚಾಲನೆ ನೀಡುತ್ತಿದ್ದೇನೆ, ತಾಲೂಕಿನಲ್ಲಿರುವ ಪ್ರತಿಯೊಂದು ಗ್ರಾಮದ ಅಭಿವೃದ್ಧಿ ಒಂದೇ ಬಾರಿ ಆಗುವುದಿಲ್ಲ, ಕೊರೊನಾ ಎಂಬ ಮಹಾಮಾರಿ ನಿಂದ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ಹೊಡೆತ ಉಂಟಾಗಿದ್ದು ಹಂತ ಹಂತವಾಗಿ ಅನುದಾನ ಮಂಜೂರು ಮಾಡಿಸಿ ಪ್ರತಿಯೊಂದು ಗ್ರಾಮಗಳನ್ನು ಅಭಿವೃದ್ಧಿ ಮಾಡುವುದಾಗಿ ತಿಳಿಸಿದರು.
ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಈ ಮಹಮಾರಿ ರೋಗವನ್ನು ತಡೆಗಟ್ಟುವಲ್ಲಿ ಎಲ್ಲರ ಪಾತ್ರ ಬಹಳ ಮುಖ್ಯವಾಗುತ್ತದೆ ಎಂದರು, ಇದೇ ವೇಳೆ ತಾಲೂಕಿನ ಅತ್ತಿಗೋಡು ಗ್ರಾಮ ಬಳಿಯ ಗುಂಡಿ ಹಳ್ಳ ಮತ್ತು ಕಿತ್ತೂರು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಈ ಸಂದರ್ಭ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಎಇಇ ಪ್ರಭು, ತಾ.ಪಂ ಸಹಾಯಕ ನಿರ್ದೇಶಕ ರಘುನಾಥ್, ತಾಲೂಕು ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ರಫೀಕ್, ಉಪ ತಹಸೀಲ್ದಾರ್ ಶಶಿಧರ್, ತಾ.ಪಂ ಸದಸ್ಯ ಕೀರ್ತಿ, ಒಂದು ಮುಖಂಡರಾದ ಅಣ್ಣಯ್ಯಶೆಟ್ಟಿ, ದಿನೇಶ್, ಕೆ.ಎಸ್ ಕೃಷ್ಣೇಗೌಡ, ಮಹದೇವ್, ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಹಾಜರಿದ್ದರು.