
ಪಿರಿಯಾಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಕೆ.ಮಹದೇವ್ ಅಧ್ಯಕ್ಷತೆಯಲ್ಲಿ ತಾಲೂಕಿನ ವಿವಿಧೆಡೆಯ ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿ ಮತ್ತು ಪಿಡಿಒಗಳ ಸಭೆ ನಡೆಯಿತು.
ಈ ವೇಳೆ ಶಾಸಕ ಕೆ.ಮಹದೇವ್ ಅವರು ಮಾತನಾಡಿ ಕೆಲ ಪಿಡಿಓಗಳ ಭ್ರಷ್ಟಾಚಾರ ಹಾಗೂ ನಿರ್ಲಕ್ಷ್ಯತನದ ವಿರುದ್ಧ ತಾಲೂಕಿನ ವಿವಿಧೆಡೆಯಿಂದ ಸಾರ್ವಜನಿಕರು ದೂರನ್ನು ನನಗೆ ನೀಡಿದ್ದು ಅಂತಹ ಅಧಿಕಾರಿಗಳಿಗೆ ಉತ್ತಮ ಕೆಲಸ ನಿರ್ವಹಿಸುವಂತೆ ಎಚ್ಚರಿಕೆ ನೀಡಿ ಕೊರೊನಾ ಸಂದರ್ಭ ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆಗೆದುಕೊಂಡಿರುವ ಮುಂಜಾಗೃತಾ ಕ್ರಮಗಳ ಬಗ್ಗೆ ಆಡಳಿತಾಧಿಕಾರಿ ಮತ್ತು ಪಿಡಿಒಗಳಿಂದ ಮಾಹಿತಿ ಪಡೆದರು, ಈ ಸಂದರ್ಭಪಿಡಿಒಗಳು ಕೇಂದ್ರ ಸ್ಥಾನದಲ್ಲಿ ವಾಸವಿರಬೇಕು, ಗ್ರಾಮ ಪಂಚಾಯಿತಿಗಳಿಗೆ ಸಿಸಿಟಿವಿ ಅಳವಡಿಸಬೇಕು ಹಾಗೂ ನಿಗದಿತ ಸಮಯಕ್ಕೆ ಕೆಲಸಕ್ಕೆ ಹಾಜರಾಗಿ ಹಳ್ಳಿಗಳಲ್ಲಿ ಸ್ವಚ್ಛತೆಗೆ ಒತ್ತು ನೀಡಿ ಅಭಿವೃದ್ಧಿಗೆ ಸಹಕಾರ ನೀಡುವಂತೆ ಸೂಚಿಸಿದರು.
ಕೆಲ ಪಿಡಿಒಗಳು ನಗರ ಪ್ರದೇಶದಿಂದ ಬೇಕಾಬಿಟ್ಟಿ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಿ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಲಂಚ ಕೇಳುತ್ತಿರುವ ದೂರು ಸಂಬಂಧ ಎಲ್ಲರಿಗೂ ಎಚ್ಚರಿಕೆ ನೀಡಿ ಉತ್ತಮ ಕರ್ತವ್ಯ ನಿರ್ವಹಿಸುವಂತೆ ಆದೇಶಿಸಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಇಒ ಡಿ.ಸಿ ಶ್ರುತಿ, ವಿವಿಧೆಡೆಯ ಪಂಚಾಯಿತಿ ಆಡಳಿತಾಧಿಕಾರಿಗಳಾದ ನಾಗರಾಜು, ಶಿವಕುಮಾರ್, ಸಿದ್ದರಾಜು, ಸಂದೇಶ್ ಸೇರಿದಂತೆ ಪಿಡಿಒಗಳು ಹಾಜರಿದ್ದರು.
