
ಪಿರಿಯಾಪಟ್ಟಣ: ಕಾಡಂಚಿನ ನಿವಾಸಿಗಳಿಗೆ ಸರ್ಕಾರದ ವತಿಯಿಂದ ಸಿಗುವ ಮೂಲಭೂತ ಸೌಕರ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಸಕ ಕೆ.ಮಹದೇವ್ ಹೇಳಿದರು.
ತಾಲೂಕಿನ ಅಬ್ಬಳತಿ ಗ್ರಾಮದ ಗಿರಿಜನ ಹಾಡಿಯ ಆಶ್ರಮ ಶಾಲೆಯಲ್ಲಿ ಗಿರಿಜನ ಕುಟುಂಬಗಳಿಗೆ ಪೌಷ್ಟಿಕ ಆಹಾರ ಸಾಮಗ್ರಿ ವಿತರಿಸಿ ಮಾತನಾಡಿದ ಅವರು ತಾಲೂಕಿನಲ್ಲಿ 34 ಗಿರಿಜನ ಹಾಡಿಗಳಿದ್ದು ಅಲ್ಲಿನ ನಿವಾಸಿಗಳಿಗೆ ಸರ್ಕಾರದ ವತಿಯಿಂದ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ನೀಡಲಾಗುತ್ತಿದ್ದು ಅನ್ಯರಿಗೆ ಮಾರಾಟ ಮಾಡದೆ ಕುಟುಂಬ ನಿರ್ವಹಣೆಗೆ ಉಪಯೋಗಿಸಿಕೊಳ್ಳಬೇಕು, ಮಳೆಗಾಲ ಸಂದರ್ಭ ಕೂಲಿ ಕೆಲಸಕ್ಕೆ ಹೋಗಲಾರದೆ ಮನೆಯಲ್ಲಿ ಇದ್ದವರಿಗೆ ಸರ್ಕಾರ ವತಿಯಿಂದ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ನೀಡಲಾಗುತ್ತಿದೆ ಪ್ರಸ್ತುತ ಎಲ್ಲರೂ ಒಂದೆಡೆ ಸೇರಿ ಆಹಾರ ಪದಾರ್ಥಗಳನ್ನು ಪಡೆಯುತ್ತಿದ್ದಾರೆ ಮುಂದಿನ ದಿನಗಳಲ್ಲಿ ಅವರ ಸ್ಥಳಗಳಿಗೆ ಹೋಗಿ ಸರ್ಕಾರದ ಸೌಲಭ್ಯಗಳನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ಬಿಇಒ ವೈ.ಕೆ ತಿಮ್ಮೇಗೌಡ, ತಾ.ಪಂ ಎಡಿ ರಘುನಾಥ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್, ಬಿಸಿಎಂ ವಿಸ್ತರಣಾಧಿಕಾರಿ ಮೋಹನ್ ಕುಮಾರ್, ಪುರಸಭಾ ಸದಸ್ಯ ಕೆ.ಮಹೇಶ್, ನಿಲಯ ಪಾಲಕ ಗುರು ಆರಾಧ್ಯ, ಮುಖಂಡರಾದ ಮಧು, ಜಾನಕಮ್ಮ, ರಫೀಕ್, ವೀರೇಂದ್ರ, ವಿಶ್ವನಾಥ್ ಮತ್ತು ಹಾಡಿ ನಿವಾಸಿಗಳು ಹಾಜರಿದ್ದರು.