ಪಟ್ಟಣದ ಹೊಸ ಹೌಸಿಂಗ್ ಬೋರ್ಡ್ ಬಡಾವಣೆಗೆ ಮೂಲಭೂತ ಸೌಕರ್ಯ ಅಭಿವೃದ್ಧಿಯ 87.15 ಹಾಗೂ ಪಿರಿಯಾಪಟ್ಟಣ ತಾಲೂಕು ಆಯಿತನಹಳ್ಳಿ ಗ್ರಾಮ ವಿಕಾಸ ಯೋಜನೆಯ ಉಳಿಕೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಅಂದಾಜುವೆಚ್ಚ 27.38 ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಪಟ್ಟಣ ವ್ಯಾಪ್ತಿಯಲ್ಲಿ ಯಾವುದೇ ವಾರ್ಡ್ ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದುರಾಗದಂತೆ ಅಧಿಕಾರಿಗಳು ನಿಗಾ ವಹಿಸಬೇಕು, ಪುರಸಭಾ ಸದಸ್ಯರು ಚುನಾಯಿತರಾಗಿ 2 ವರ್ಷ ಕಳೆದರು ಮೀಸಲಾತಿ ಸಂಬಂಧ ಅಧಿಕಾರ ಸ್ವೀಕರಿಸದ ಹಿನ್ನೆಲೆ ಸ್ವಲ್ಪಮಟ್ಟಿನ ಅಭಿವದ್ಧಿ ಕುಂಠಿತವಾಗಿದ್ದರೂ ಶೀಘ್ರದಲ್ಲೇ ಜೆಡಿಎಸ್ ಬೆಂಬಲಿತರು ಅಧಿಕಾರ ಸ್ವೀಕರಿಸಿರುವುದರಿಂದ ಸರ್ಕಾರದಿಂದ ಇನ್ನೂ ಹೆಚ್ಚಿನ ಅನುದಾನ ತಂದು ಪಟ್ಟಣದ ಅಭಿವದ್ಧಿಗೆ ಮೀಸಲಿಡುವುದಾಗಿ ತಿಳಿಸಿದರು, ಪಟ್ಟಣದ ಹೊಸ ಹೌಸಿಂಗ್ ಬೋರ್ಡ್ ಕಾಲೋನಿಗೆ ಮೂಲಭೂತ ಸೌಕರ್ಯ ಮರೀಚಿಕೆಯಾಗಿರುವುದನ್ನು ಮನಗಂಡು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದು ಮುಂದಿನ ದಿನಗಳಲ್ಲಿ ಪಟ್ಟಣದಲ್ಲಿ ಯಾವುದೇ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿ ಪಟ್ಟಣದಲ್ಲಿ ಈಗಾಗಲೇ ಚಾಲನೆಯಲ್ಲಿರುವ ಒಳಚರಂಡಿ ಕಾಮಗಾರಿ ಶೀಘ್ರ ಮುಗಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ನಾನು ಪಟ್ಟಣದಲ್ಲೇ ವಾಸಿಸುವುದರಿಂದ ಪ್ರತಿನಿತ್ಯ ನೂರಾರು ಸಾರ್ವಜನಿಕರು ಸೌಕರ್ಯ ಕೊರತೆ ಸಂಬಂಧ ದೂರು ನೀಡುತ್ತಾರೆ ಮುಂದಿನ ದಿನಗಳಲ್ಲಿ ಅಧಿಕಾರಿಗಳು ಇದಕ್ಕೆ ಆಸ್ಪದ ನೀಡದಂತೆ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.
ಈ ಸಂದರ್ಭ ಪುರಸಭಾ ಸದಸ್ಯರಾದ ಮಂಜುನಾಥ್ ಸಿಂಗ್, ನೂರ್ ಜಹಾನ್, ಪಿ.ಸಿ ಕೃಷ್ಣ, ಪ್ರಕಾಶ್ ಸಿಂಗ್, ಕೆ.ಮಹೇಶ್, ವಿನೋದ್, ನಿರಂಜನ್, ಮುಖ್ಯಾಧಿಕಾರಿ ಚಂದ್ರಕುಮಾರ್ ಮತ್ತು ಸಿಬ್ಬಂದಿ ಮುಖಂಡರಾದ ಸೈಯದ್ ಇಲಿಯಾಸ್, ಮುಶೀರ್ ಖಾನ್, ಉಮೇಶ್, ಕುಮಾರ್,
ಸುರೇಶ್, ಶಿವಣ್ಣ, ವಿಜಯ್ ಮತ್ತಿತರಿದ್ದರು.
