
ಮೀಸಲಾತಿಯ ವಿವಾದ ಹೈಕೊರ್ಟ್ ಮೆಟ್ಟಿಲೇರಿದ್ದರಿಂದ ಕಳೆದ 2 ವರ್ಷಗಳಿಂದ ನೆನೆಗುದಿಗೆ ಬಿದ್ದಿದ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಸರ್ಕಾರವು ಇತ್ತಿಚಿಗೆ ಹೊಸದಾಗಿ ಮೀಸಲಾತಿ ಪ್ರಕಟಗೊಳಿಸಿದ್ದರಿಂದ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರೀಯೆ ಸೋಮವಾರ ನಡೆಯಿತು.
ಇಲ್ಲಿಯ ಪಟ್ಟಣ ಪಂಚಾಯಿತಿಯು ಪುರಸಭೆಯಾಗಿ ಮೇಲ್ದರ್ಜೆಗೇರಿದ ನಂತರ ಪ್ರಥಮ ಬಾರಿಗೆ ಪುರಸಭಾ ಚುನಾವಣೆ ನಡೆದು 2 ವರ್ಷ ಕಳೆದರೂ ಅಧಿಕಾರ ಭಾಗ್ಯ ಸಿಕ್ಕಿರಲಿಲ್ಲ.ಈಗ ಸರ್ಕಾರದ ಮೀಸಲಾತಿಯ ಅನ್ವಯ ಅಧ್ಯಕ್ಷ ಬಿಸಿಎ ಸ್ಥಾನದ ಮಂಜುನಾಥ್ ಸಿಂಗ್ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ(ಮಹಿಳೆ) ಸ್ಥಾನದಿಂದ ನಾಗರತ್ನ ಉಮೇಶ್ ಆಯ್ಕೆಯಾಗಿದ್ದಾರೆ.

ಒಟ್ಟು 23 ಮಂದಿ ಸದಸ್ಯರನ್ನು ಹೊಂದಿರುವ ಪುರಸಭೆಯಲ್ಲಿ ಜೆಡಿಎಸ್ ಪಕ್ಷದ 14 ಮತ್ತು ಕಾಂಗ್ರೇಸ್ ಪಕ್ಷದ 8 ಸದಸ್ಯರು ಸೇರಿದಂತ್ತೆ ಒಬ್ಬರು ಪಕ್ಷೇತರು ಚುನಾಹಿತರಾಗಿದ್ದರು. ಇಂದು ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಶಾಸಕ ಕೆ.ಮಹದೇವ್ ಮತ್ತು ಒಬ್ಬ ಪಕ್ಷೇತರ ಅಭ್ಯರ್ಥಿ ಸೇರಿದಂತ್ತೆ 16 ಮತ ಜೆಡಿಎಸ್ ಅಭ್ಯರ್ಥಿಗಳ ಪರ ಹಾಗೂ ಕಾಂಗ್ರೇಸ್ನಿAದ ಸ್ಪರ್ಧಿಸಿದ್ದ ಅಧ್ಯಕ್ಷ ಸ್ಥಾನ ಅಭ್ಯರ್ಥಿ ಅಬ್ದುಲ್ ಹರ್ಷದ್ ಮತ್ತು ಉಪಾಧ್ಯಕ್ಷ ಸ್ಥಾನದ ಮಂಜುಳಾ ರಾಜ್ ಪರ 8 ಮತ ಚಲಾವಣೆಯಾಯಿತು.