
ಪಟ್ಟಣದ ನೂತನ ಪುರಸಭೆ ಕಟ್ಟಡ ಆವರಣದ ಕಾಂಕ್ರಿಟ್ ರಸ್ತೆ ಮತ್ತು ಸಾರ್ವಜನಿಕ ಶೌಚಾಲಯ ನಿರ್ಮಾಣದ 48ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು, ಮೀಸಲಾತಿ ಸಂಬಂಧ ಕಳೆದ 2ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಕೆಲ ದಿನಗಳ ಹಿಂದೆ ನಡೆದಿದ್ದು ಆಡಳಿತ ವರ್ಗ ಪಟ್ಟಣದ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪಾರದರ್ಶಕ ಕರ್ತವ್ಯ ನಿರ್ವಹಿಸಬೇಕು, ಪುರಸಭಾ ಮುಖ್ಯಾಧಿಕಾರಿ ಮತ್ತು ಸಿಬ್ಬಂದಿ ಪ್ರತಿದಿನ ವಾರ್ಡ್ ಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಬೇಕು, ಬಾಕಿ ಇರುವ ತೆರಿಗೆ ವಸೂಲಿ ಮಾಡಿ ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳುವಂತೆ ಹೇಳಿದರು.

ನೂತನ ಅಧ್ಯಕ್ಷ ಮಂಜುನಾಥ್ ಸಿಂಗ್ ಮಾತನಾಡಿ ಪಟ್ಟಣದಲ್ಲಿನ ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಕರ್ತವ್ಯ ನಿರ್ವಹಿಸುವುದಾಗಿ ಹೇಳಿದರು.
ಇದೇ ವೇಳೆ ಪುರಸಭಾ ಸದಸ್ಯರು ಕಚೇರಿಯಲ್ಲಿನ ಸಿಬ್ಬಂದಿ ಸಾರ್ವಜನಿಕ ಕೆಲಸಗಳಿಗೆ ವಿಳಂಬ ಹಾಗೂ ಖಾತೆ ಬದಲಾವಣೆಗೆ ನಿರ್ಲಕ್ಷ್ಯ ತೋರುತ್ತಿರುವುದಾಗಿ ಶಾಸಕರಿಗೆ ದೂರಿದಾಗ ಮುಖ್ಯಾಧಿಕಾರಿ ಚಂದ್ರಕುಮಾರ್ ಅವರಿಗೆ ಸದಸ್ಯರಿಂದ ಮತ್ತೆ ದೂರುಗಳು ಬರದಂತೆ ಕರ್ತವ್ಯ ನಿರ್ವಹಿಸುವಂತೆ ಹೇಳಿ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಲಾಗದಿದ್ದರೆ ಅಂತಹವರ ವಿರುದ್ಧ ಶಿಸ್ತು ಕ್ರಮಕ್ಕೆ ಜಾರಿಯ ಅಗತ್ಯ ಕ್ರಮಕ್ಕೆ ಮುಂದಾಗುವುದಾಗಿ ತಿಳಿಸಿದರು.
ಈ ಸಂದರ್ಭ ಉಪಾಧ್ಯಕ್ಷೆ ನಾಗರತ್ನ, ಸದಸ್ಯರಾದ ರೂಹಿಲ್ಲ ಖಾನ್, ಪಿ.ಸಿ ಕೃಷ್ಣ, ಮಹೇಶ್, ವಿನೋದ್, ನಿರಂಜನ, ಭಾರತಿ, ಮಂಜುನಾಥ್, ಹರ್ಷದ್, ಪುಷ್ಪಲತಾ, ರವಿ ಮುಖಂಡರಾದ ಸೈಯದ್ ಇಲಿಯಾಸ್, ಮುಶೀರ್ ಖಾನ್, ಉಮೇಶ್, ಕುಮಾರ್ ಮತ್ತು ಪುರಸಭೆ ಸಿಬ್ಬಂದಿ ಹಾಜರಿದ್ದರು.
