
ತಾಲೂಕಿನ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ಗ್ರಾಮದಲ್ಲಿ ಅಭಿವೃದ್ಧಿಗಾಗಿ ಮರಳಿ ಪಕ್ಷಕ್ಕೆ ಬರುವವರಿಗೆ ಸದಾ ಸ್ವಾಗತವಿದೆ ಶಾಸಕ ಕೆ ಮಹದೇವ್ ತಿಳಿಸಿದರು. ಪಿರಿಯಾಪಟ್ಟಣ ತಾಲೂಕಿನ ಹಿಟ್ನೆಹೆಬ್ಬಾಗಿಲು ಗ್ರಾಮದ ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಸುಚಿತ್ರ ವಿನೋದ್ ಹಾಗೂ ಮತ್ತಿತರರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡ ಸಮಾರಂಭದಲ್ಲಿ ಮಾತನಾಡಿದ ಶಾಸಕರು ಹಿಟ್ನೆಹೆಬ್ಬಾಗಿಲು ಗ್ರಾಮದ ಮುಖಂಡ ವಿನೋದ್ ಮತ್ತು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸುಚಿತ್ರ ವಿನೋದ್ ಜೆಡಿಎಸ್ ಪಕ್ಷದಲ್ಲಿ ಇದ್ದರು ಕೆಲಕಾರಣಗಳಿಂದ ಸಕ್ರಿಯ ರಾಜಕಾರಣದಿಂದ ದೂರವುಳಿದಿದ್ದರು ಗ್ರಾಮದ ಅಭಿವೃದ್ಧಿಗಾಗಿ ಜೆಡಿಎಸ್ ಸೇರ್ಪಡೆಗೊಳ್ಳುತ್ತಿದ್ದಾರೆ ಎಲ್ಲ ಗ್ರಾಮಗಳ ಅಭಿವೃದ್ಧಿಯನ್ನು ಏಕಕಾಲದಲ್ಲಿ ಮಾಡಲು ಸಾಧ್ಯವಿಲ್ಲ ಆದ್ದರಿಂದ ಜನರು ತಾಳ್ಮೆಯಿಂದ ಇರಬೇಕು ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡದಿದ್ದರೆ ಗ್ರಾಮದ ಅಭಿವೃದ್ಧಿಯನ್ನು ಒಟ್ಟಿಗೆ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಶಿವಪ್ಪ ಸುರೇಶ್ ನಾಗಮ್ಮ ಸೇರಿದಂತೆ ನೂರಾರು ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡರು