
ಪಟ್ಟಣದ ಕನ್ನಂಬಾಡಿ ಅಮ್ಮ ದೇವಸ್ಥಾನದ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಸಂಘಟಿತ ಕಾರ್ಮಿಕ ಸಂಘಟನೆಗಳ ಒಕ್ಕೂಟ ವನ್ನು ಉದ್ಘಾಟಿಸಿ ಮಾತನಾಡಿದ ಅವರು ಸ್ವಯಂ ಉದ್ಯೋಗದ ಮೂಲಕ ತಮ್ಮ ಬದುಕನ್ನು ಕಟ್ಟಿಕೊಳ್ಳಲು ಹಾತೊರೆಯುತ್ತಿರುವ ವೃತ್ತಿಪರ ಕಾರ್ಮಿಕರು ಇಂದು ತಮ್ಮ ಕಸುಬಿನಲ್ಲಿ ಆದಾಯವನ್ನು ಕಾಣಲು ಸಾಧ್ಯವಾಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಈ ವಿಚಾರವಾಗಿ ಸರ್ಕಾರದ ಗಮನ ಸೆಳೆಯಲು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಹೋರಾಟ ಮಾಡುತ್ತೇನೆ ಎಂದರು. ಸ್ತ್ರೀ, ಪುರುಷ ಎಂಬ ತಾರತಮ್ಯವಿಲ್ಲದೆ ಕಾರ್ಮಿಕರು ಇಂದು ದುಡಿಯುತ್ತಿದ್ದಾರೆ ಅದರಂತೆ ಇವರ ಆರ್ಥಿಕ ಸದೃಢತೆಗೆ ಸರ್ಕಾರವು ಈಗಾಗಲೇ 8000 ಕೋಟಿ ರೂಗಳಷ್ಟು ಅನುದಾನವನ್ನು ಮೀಸಲಿರಿಸಿರುವ ಬಗ್ಗೆ ಮಾಹಿತಿ ಇದ್ದು ಇವುಗಳ ಸಮರ್ಪಕ ಬಳಕೆಯನ್ನು ಮಾಡಿಕೊಳ್ಳಲು ಅಸಂಘಟಿತ ಕಾರ್ಮಿಕರು ಮುಂದಾಗಬೇಕು ಎಂದು ಕರೆ ನೀಡಿದರು. ಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಸಂಬಂಧಪಟ್ಟ ಇಲಾಖಾಧಿಕಾರಿಗಳು ಮತ್ತು ಸಂಘಟನಾಕಾರರು ಕಾರ್ಮಿಕರಿಗೆ ಮಾಹಿತಿಯನ್ನು ನೀಡಬೇಕು. ಆಗ ಮಾತ್ರ ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪಲು ಸಾಧ್ಯ. ಸರ್ಕಾರವು ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸ, ಸ್ವಯಂ ಉದ್ಯೋಗ, ಆರೋಗ್ಯ ವಿಮೆಗಳಿಗೆ ಆರ್ಥಿಕ ನೆರವು ನೀಡುತ್ತಿದ್ದು, ಇವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ವಿವಿಧ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರಿಗೆ ನೊಂದಣಿ ಪತ್ರವನ್ನು ನೀಡಲಾಯಿತು.

ಸಂಘದ 2021 ದಿನದರ್ಶಿಕೆಯನ್ನು ಬಿಡುಗಡೆ ಮಾಡಲಾಯಿತು.

ಮೈಸೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಎ.ಸಿ ತಮ್ಮಣ್ಣ, ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಟಿ.ಸಿ ವಸಂತ ರಾಜೇ ಅರಸ್, ಕಾರ್ಮಿಕ ನಿರೀಕ್ಷಕ ಗಂಗಾಧರ್, ನಿವೃತ್ತ ಉಪನ್ಯಾಸಕ ಆರ್.ಎಸ್ ದೊಡ್ಡಣ್ಣ, ಸಂಘದ ತಾಲೂಕು ಅಧ್ಯಕ್ಷ ಎ.ಮಲ್ಲಶೆಟ್ಟಿ ಇತರರು ಹಾಜರಿದ್ದರು .
