ಸರ್ಕಾರದ ಸೌಲಭ್ಯಗಳು ಸದುಪಯೋಗವಾಗುವಂತೆ ಅಧಿಕಾರಿಗಳು ಗಮನಹರಿಸಬೇಕು – ಶಾಸಕ ಕೆ.ಮಹದೇವ್ 22/01/2021

ಪಟ್ಟಣದ ಗೋಣಿಕೊಪ್ಪ ರಸ್ತೆಯ ಸರ್ಕಾರಿ ಜೂನೀಯರ್ ಕಾಲೇಜು ಮೈದಾನದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ  ಹಾಗೂ ಕೇಂದ್ರಿಯ ಪ್ಲಾಸ್ಟಿಕ್ ತಂತ್ರಜ್ಞಾನ ಸಂಸ್ಥೆಯ ಸಹಯೋಗದಲ್ಲಿ ಕೌಶಲ್ಯಾಭಿವೃದ್ದಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಕೈಗಾರಿಕಾ ಮತ್ತು ವಾಣಿಜ್ಯ ನಿರ್ದೆಶನಾಯಲದ ಪ್ರಾಯೋಜಕತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ತಾಲ್ಲೂಕಿನಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಸರ್ಕಾರದ ವತಿಯಿಂದ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮ ಅಧಿಕಾರಿಗಳ ಇಚ್ಚಾಶಕ್ತಿಯ ಕೊರತೆ ಮತ್ತು ಸಂಸ್ಥೆಯ ನಿರಾಸಕ್ತಿಯಿಂದ  ಕಾರ್ಯಕ್ರಮ ವಿಫಲವಾಗಿದೆ ಎಂದು ಶಾಸಕ ಕೆ.ಮಹದೇವ್ ಬೇಸರ ವ್ಯಕ್ತಪಡಿಸಿದರು. ನಿರುದ್ಯೋಗ ಯುವಕ ಯುವತಿಯರು ಕೌಶಲ್ಯ ತರಬೇತಿ ಪಡೆಯುವ ಮುಖಾಂತರ ಸ್ವ ಉದ್ಯೋಗಕ್ಕೆ ಸಹಕಾರಿಯಾಗಲಿದ್ದು ತರಬೇತಿಯ ವೆಚ್ಚ ಸರ್ಕಾರವೇ  ಭರಿಸುವುದರಿಂದ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ನಿರುದ್ಯೋಗ ಯುವಕ ಯುವತಿಯರು ಪಾಲ್ಗೊಳ್ಳದ್ದನ್ನು ಗಮನಿಸಿ ಇಂತಹ ಕಾರ್ಯಕ್ರಮಗಳಿಗೆ ಪ್ರಚಾರದ ಕೊರತೆಯಾಗಬಾರದು ತಾಲ್ಲೂಕಿನಾದ್ಯಂತ ತರಬೇತಿಯ ಪ್ರಚಾರ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳು ಸದುಪಯೋಗವಾಗುವಂತೆ ಅಧಿಕಾರಿಗಳು ಗಮನಹರಿಸುವಂತೆ ಸೂಚಿಸಿದರು.  ಮುಂದಿನ ದಿನಗಳಲ್ಲಿ ಇದೇ ಕಾರ್ಯಕ್ರಮವನ್ನು ಹೆಚ್ಚಿನ ಪ್ರಚಾರ ನೀಡಿ ಯಶಸ್ಸು ಮಾಡಬೇಕು ಇದಕ್ಕೆ ನಾನು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು.

 ಈ ಸಂದರ್ಭದಲ್ಲಿ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಎ.ಟಿ.ರಂಗಸ್ವಾಮಿ,ಪುರಸಭೆ ಅಧ್ಯಕ್ಷ ಮಂಜುನಾಥ್ ಸಿಂಗ್,ಸ್ಥಾಯಿ ಸಮಿತಿ ಅಧ್ಯಕ್ಷ ವಿನೋದ್,ಸದಸ್ಯ ನಿರಂಜನ್,ಮಹೇಶ್,ಮುಖ್ಯಾಧಿಕಾರಿ ಚಂದ್ರು ಕುಮಾರ್,ಕ್ಷೇತ್ರ ಶಿಕ್ಷಣಾದಿಕಾರಿ ತಿಮ್ಮೆಗೌಡ,ಕೃಷಿ ಇಲಾಖಾಧಿಕಾರಿ ಶಿವಕುಮಾರ್,ಎಇಇ ನಾಗರಾಜು,ಪ್ರಭು,ಕುಮಾರ್,ಮುಖಂಡರಾದ ಉಮೇಶ್,ಸಾಹಿದಾ ಭಾನು ಸೇರಿದಂತ್ತೆ ಇತರರು  ಹಾಜರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top