ಪಟ್ಟಣದ ಗೋಣಿಕೊಪ್ಪ ರಸ್ತೆಯ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ನಡೆದ 72 ನೇ ಗಣರಾಜ್ಯೋತ್ಸವ ಕಾರ್ಯಕ್ರಮ 26/01/2021

ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಣಿಕೊಪ್ಪ ರಸ್ತೆಯ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ನಡೆದ 72 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಕೆ.ಮಹದೇವ್ ಧ್ವಜಾರೋಹಣ ನೆರವೇರಿಸಿದರು.
ನಂತರ ಮಾತನಾಡಿದ ಅವರು ಇತರೆ ದೇಶಗಳಿಗೆ ಹೋಲಿಸಿದರೆ ಭಾರತ ದೇಶ ಸರ್ವ ಸ್ವತಂತ್ರ ಸಂಪದ್ಭರಿತವಾಗಿದ್ದರೂ ಅದರ ಸದ್ಬಳಕೆ ಸರಿಯಾಗಿ ಆಗುತ್ತಿಲ್ಲ, ಬಡತನ ಸೇರಿದಂತೆ ದೇಶದಲ್ಲಿನ ಹಲವಾರು ಸಮಸ್ಯೆಗಳಿಗೆ ಪರಿಹಾರ ಸಿಗದಿರುವುದು ಆಡಳಿತಕ್ಕೆ  ಹಿನ್ನಡೆಯಾಗಿದೆ ಸರ್ವರಿಗೂ ಸಮಾನ ಹಕ್ಕು ಸಿಗುವ ನಿಟ್ಟಿನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಮಹತ್ವವನ್ನು ಎಲ್ಲರೂ ಅರಿತು ಜಾಗೃತರಾಗಬೇಕು, ರಾಷ್ಟ್ರೀಯ ಹಬ್ಬಗಳಂದು ಮಾತ್ರ ದೇಶಕ್ಕಾಗಿ ಹೋರಾಡಿದ ಮಹನೀಯರನ್ನು ನೆನೆಯದೆ ಪ್ರತಿನಿತ್ಯ ಅವರಿಗೆ ಗೌರವ ಸಲ್ಲಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದರು

 ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ ಧ್ವಜ ಸಂದೇಶ ನೀಡಿದರು, ಬಿಇಒ ವೈ.ಕೆ ತಿಮ್ಮೇಗೌಡ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ರಂಗಸ್ವಾಮಿ ಗಣರಾಜ್ಯೋತ್ಸವ ಕುರಿತು ಮಾತನಾಡಿದರು, ಇದೇ ವೇಳೆ ತಾಲ್ಲೂಕಿನಲ್ಲಿ ಕರ್ತವ್ಯ ನಿರ್ವಹಿಸಿ ಪದೋನ್ನತಿ ಹೊಂದಿದ ತಾ.ಪಂ ಕಾರ್ಯ ನಿರ್ವಹಕಾಧಿಕಾರಿ ಡಿ.ಸಿ ಶ್ರುತಿ, ಪಿಡಬ್ಲ್ಯುಡಿ ಎಇಇ ನಾಗರಾಜ್, ಸರ್ಕಲ್ ಇನ್ಸ್ ಪೆಕ್ಟರ್ ಬಿ.ಆರ್ ಪ್ರದೀಪ್, ಅಡಗೂರು ಗ್ರಾಮದ ಯುವರೈತ ಸುಪ್ರೀತ್, ನಿವೃತ್ತ ಪಿಡಿಒ ಶಿವಯೋಗ ಅವರನ್ನು ಸನ್ಮಾನಿಸಲಾಯಿತು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಕೊರೊನಾ ಸೋಂಕು ಹರಡುವಿಕೆ ಮತ್ತು ತಡೆಗಟ್ಟುವ ಕುರಿತು ನೃತ್ಯದ ಮೂಲಕ ಪ್ರದರ್ಶಿಸಿದ ನಾಟಕಕ್ಕೆ  ಗಣ್ಯರು ಹಾಗೂ ಪ್ರೇಕ್ಷಕರಿಂದ ಪ್ರಶಂಸೆ ವ್ಯಕ್ತವಾಯಿತು, ತಾಲ್ಲೂಕಿನ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲಾ ಶಿಕ್ಷಕರುಗಳಿಗೆ ಶಿಕ್ಷಣ ಇಲಾಖೆ ವತಿಯಿಂದ ಜ್ಯೋತಿ ಸಂಜೀವಿನಿ ಕಾರ್ಡ್ ಅನ್ನು ಶಾಸಕರು ವಿತರಿಸಿದರು.

ಕಾರ್ಯಕ್ರಮದಲ್ಲಿ ತಾ.ಪಂ ಅಧ್ಯಕ್ಷೆ ಕೆ.ಆರ್ ನಿರೂಪ, ಪುರಸಭಾ ಅಧ್ಯಕ್ಷ ಮಂಜುನಾಥ್ ಸಿಂಗ್, ಉಪಾಧ್ಯಕ್ಷೆ ನಾಗರತ್ನ, ಸದಸ್ಯರಾದ ಪಿ.ಸಿ ಕೃಷ್ಣ, ನಿರಂಜನ್, ನೂರ್ ಜಹಾನ್, ಮಂಜುನಾಥ್, ಮುಖ್ಯಾಧಿಕಾರಿ ಚಂದ್ರಕುಮಾರ್, ಶಿರಸ್ತೇದಾರ್ ಗಳಾದ ಶಕಿಲಾಬಾನು, ಟ್ರಿಜಾ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ್ ಕುಮಾರ್, ಮಾಜಿ ಅಧ್ಯಕ್ಷ ಎಂ.ಕೆ ಪ್ರಕಾಶ್,  ಟಿಎಪಿಸಿಎಂಎಸ್ ಅಧ್ಯಕ್ಷ ತಿಮ್ಮೇಗೌಡ, ಎಪಿಎಂಸಿ ಅಧ್ಯಕ್ಷ ಶಂಕರಪ್ಪ, ಸಿಡಿಪಿಒ ಕುಮಾರ್, ಜಿ.ಪಂ ಎಇಇ ಪ್ರಭು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್, ಎಡಿಎಲ್ ಆರ್ ಚಿಕ್ಕಣ್ಣ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ಆರ್ ಡಬ್ಲ್ಯುಎಸ್ ಎಇಇ ಶಿವಕುಮಾರ್, ಸಬ್ ಇನ್ಸ್ಪೆಕ್ಟರ್ ಗಳಾದ ಸದಾಶಿವ ತಿಪರೆಡ್ಡಿ, ಪುಟ್ಟರಾಜು ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಣ ಮತ್ತು ಕಂದಾಯ ಇಲಾಖೆ ನೌಕರರು ಹಾಜರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top