ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸರ್ಕಾರದಿಂದ ನೀಡಲಾಗಿದ್ದ ಆಂಬ್ಯುಲೆನ್ಸ್ ಗೆ ಶಾಸಕ ಕೆ.ಮಹದೇವ್ ಚಾಲನೆ ನೀಡಿದರು 27/01/2021

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಂಬ್ಯುಲೆನ್ಸ್ ಕೊರತೆ ಸಂಬಂಧ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದ ಶಾಸಕರು, ಮನವಿಗೆ ಸ್ಪಂದಿಸಿದ ಸರ್ಕಾರ.

108 ಆಂಬುಲೆನ್ಸ್ ಗಳ ಬಗ್ಗೆ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆ ಅದರ ನಿರ್ವಹಣೆಯನ್ನು ಖಾಸಗಿಯವರಿಂದ ಜಿಲ್ಲಾ ಆರೋಗ್ಯ ಇಲಾಖೆ ಅಥವಾ ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ನೀಡಲು ಆರೋಗ್ಯ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದ ಶಾಸಕರು.

ಪಿರಿಯಾಪಟ್ಟಣ ತಾಲ್ಲೂಕಿನ 24×7 5 ಹೆರಿಗೆ ಕೇಂದ್ರಗಳಿಗೆ ಆಂಬ್ಯುಲೆನ್ಸ್ ಸೇವೆ ಒದಗಿಸಲು ಆರೋಗ್ಯ ಇಲಾಖೆಗೆ ಮನವಿ ಸಲ್ಲಿಸುವುದಾಗಿ ಶಾಸಕರ ಭರವಸೆ.

ಆಂಬುಲೆನ್ಸ್ ಚಾಲಕರು ರೋಗಿಗಳು ಹಾಗೂ ಅವರ ಸಂಬಂಧಿಕರೊಂದಿಗೆ ಸೌಜನ್ಯಯುತವಾಗಿ ನಡೆದುಕೊಳ್ಳುವಂತೆ ಶಾಸಕರಿಂದ ಸೂಚನೆ.

ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಜೆ ಶ್ರೀನಿವಾಸ್ ಮಾತನಾಡಿ ಶಾಸಕರ ಸಹಕಾರದಿಂದ ಸರ್ಕಾರ ತಾಲ್ಲೂಕಿಗೆ ಆಂಬ್ಯುಲೆನ್ಸ್ ನೀಡಿರುವುದರಿಂದ ಸ್ವಲ್ಪಮಟ್ಟಿನ ಆಂಬ್ಯುಲೆನ್ಸ್ ಸೇವೆಯ ಕೊರತೆ ನೀಗಿಸಬಹುದಾಗಿದೆ, ಪಟ್ಟಣದ ಆಸ್ಪತ್ರೆ ಸೇರಿದಂತೆ ತಾಲ್ಲೂಕಿನ ವಿವಿಧೆಡೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆಗೆ ಆಂಬ್ಯುಲೆನ್ಸ್ ಗಳ ಅವಶ್ಯಕತೆ ಇರುವುದರಿಂದ ಮುಂದಿನ ದಿನಗಳಲ್ಲಿ ಒದಗಿಸಿ ಕೊಡುವಂತೆ ಕೋರಿದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಜೆ ಶ್ರೀನಿವಾಸ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶರತ್ ಬಾಬು, ವೈದ್ಯರಾದ ಡಾ.ಸದಾಶಿವ, ಡಾ.ಮಹದೇವ ಸ್ವಾಮಿ, ಡಾ.ದೇವಿಕ ಸೇರಿದಂತೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿ ಪಾಲ್ಗೊಂಡಿದ್ದರು

Leave a Comment

Your email address will not be published. Required fields are marked *

error: Content is protected !!
Scroll to Top